ಕೆ.ಎನ್.ಪಿ.ವಾರ್ತೆ,ಧಾರವಾಡ,ನ.17;

ಧಾರವಾಡದಲ್ಲಿ ಜನವರಿ 4, 5 ಮತ್ತು 6 ರಂದು ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ನಿನ್ನೆ ಬಿಡುಗಡೆ ಮಾಡಲಾಗಿದೆ. 

ನಿನ್ನೆ ನಡೆದ ಸಮಾರಂಭದಲ್ಲಿ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರೂಪಿಸಲಾಗಿರುವ ಲಾಂಛನ ಹಾಗೂ ವೆಬ್‌ಸೈಟ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅನಾವರಣಗೊಳಿಸಿದರು.

ಕನ್ನಡ ಧ್ವಜ, ಭುವನೇಶ್ವರಿ ಭಾವಚಿತ್ರ, ಕನ್ನಡ ಸಾಹಿತ್ಯ ಪರಿಷತ್ ಲಾಂಛನ, ಕರ್ನಾಟಕ ಕಾಲೇಜು, ಕರ್ನಾಟಕ ವಿ.ವಿ., ಕರ್ನಾಟಕ ವಿದ್ಯಾವರ್ಧಕ ಸಂಘ, ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ಪ್ರತಿಮೆಗಳನ್ನು ಲಾಂಛನ ಒಳಗೊಂಡಿದೆ. ಸ್ಥಳೀಯ ಕಲಾವಿದ ಮಹೇಶ್ ಪತ್ತಾರ ರಚಿಸಿದ ಈ ಲಾಂಛನವನ್ನು ತಜ್ಞರ ಸಮಿತಿ ಅಂತಿಮಗೊಳಿಸಿದೆ. ಸಮ್ಮೇಳನದ ಚಟುವಟಿಕೆಗಳ ಎಲ್ಲ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸಲು ವೆಬ್‌ಸೈಟ್ ಆರಂಭಿಸಲಾಗಿದೆ.

ಬಜೆಟ್ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕಳುಹಿಸಲಾಗಿದೆ. ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ. ಸಮ್ಮೇಳನ ಸ್ಥಳದ ಬಗ್ಗೆ ಕೆಲವು ಗೊಂದಲಗಳಿರುವುದು ತಿಳಿದಿದೆ. ಸೂಕ್ತವಾದ ಸ್ಥಳವನ್ನು ಅಂತಿಮಗೊಳಿಸಲಾಗುವುದು’ ಎಂದು ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಕತೆಕವನಲೇಖನಜೀವನ ಚರಿತ್ರೆಚುಟುಕುಹೀಗೆ ಯಾವುದೇ ಪ್ರಕಾರವಾಗಲಿ ಬರೆದುಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿಲೈಕ್ ಮಾಡಿಸಬ್ ಸ್ಕ್ರೈಬ್ ಮಾಡಿಕಮೆಂಟ್ ಮತ್ತು ಶೇರ್ ಮಾಡಿರಿ.