ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.24;

ಸ್ಯಾಂಡಲ್‍ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಬೆಳಗ್ಗೆ 7.15ರಿಂದ 7.45ಕ್ಕೆ ಶುಭ ಮೂಹೂರ್ತದಲ್ಲಿ ಧ್ರುವ ಸರ್ಜಾ, ಪ್ರೇರಣಾ ಅವರನ್ನು ವರಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ನವಜೋಡಿ ಸಪ್ತಪದಿ ತುಳಿದಿದ್ದಾರೆ.

ಜೆ.ಪಿ.ನಗರದ ಸಂಸ್ಕೃತ ಬೃಂದಾವನ ಕನ್ವೆನ್ಷನ್ ಹಾಲ್ ನಲ್ಲಿ ಕುಟುಂಬಸ್ಥರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹ ಮಹೋತ್ಸವ ನೇರವೇರಿದ್ದು, ಗೌಡ ಸಂಪ್ರದಾಯದಂತೆ ಧ್ರುವ ಹಾಗೂ ಪ್ರೇರಣಾ ಸಪ್ತಪದಿ ತುಳಿದಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಇಂದು ಸಂಜೆ 7.30ಕ್ಕೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅದ್ದೂರಿ ಆರತಕ್ಷತೆ ಕಾರ್ಯಕ್ರಮಕ್ಕೆ ಚಿತ್ರರಂಗದ ಗಣ್ಯರು ಭಾಗಿಯಾಗಿ ಧ್ರುವ ಮತ್ತು ಪ್ರೇರಣಾ ಜೋಡಿಗೆ ಆಶೀರ್ವಾದ ಮಾಡಲಿದ್ದಾರೆ. 

ನಾಳೆ ಅಭಿಮಾನಿಗಳಿಗಾಗಿ ಸರ್ಜಾ ಕುಟುಂಬ ವಿಶೇಷ ಔತಣ ಕೂಟ ಏರ್ಪಡಿಸಿದೆ. ಜೊತೆಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಇರಲಿವೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.