ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.29;

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರಿಗೆ ಆಗಸ್ಟ್‌ 8ರಂದು ದೇಶದ ಅತ್ಯುನ್ನತ ಪ್ರಶಸ್ತಿಯಾದ ‘ಭಾರತ ರತ್ನ’ ವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರದಾನ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.

ಅಂತೆಯೇ ಸಾಮಾಜಿಕ ಕಾರ‍್ಯಕರ್ತ ನಾನಾಜಿ ದೇಶ್‌ಮುಖ್‌ ಹಾಗೂ ಅಸ್ಸಾಮಿ ಗಾಯಕ ಅಸ್ಸಾಂನ ಭೂಪೇನ್‌ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರಕಟಿಸಲಾಗಿದೆ. ಆಗಸ್ಟ್‌ 8ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದೇಶ್‌ಮುಖ್‌ ಹಾಗೂ ಹಜಾರಿಕಾ ಅವರ ಕುಟುಂಬ ಸದಸ್ಯರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರಗಳಲ್ಲಿ ವಿತ್ತ ಖಾತೆ ಸೇರಿದಂತೆ ನಾನಾ ಬಗೆಯ ಖಾತೆಗಳನ್ನು ನಿಭಾಯಿಸಿದ ಮುಖರ್ಜಿ ಅವರು 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

2012ರಿಂದ 2017ರವರೆಗೂ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ ಪ್ರಣಬ್ ಮುಖರ್ಜಿ, ‘ಪ್ರಣಬ್ ದಾ’ ಎಂದು ಖ್ಯಾತರಾಗಿದ್ದಾರೆ. 83 ವರ್ಷದ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಪಕ್ಷದ ಸರ್ವಶ್ರೇಷ್ಠ ವ್ಯಕ್ತಿಯಾಗಿಯೂ ಹೆಸರಾಗಿದ್ದಾರೆ. ದಶಕಗಳ ಕಾಲ ದೇಶಕ್ಕೆ ಅವರು ಸಲ್ಲಿಸಿದ ಕೊಡುಗೆಗಾಗಿ ಪ್ರಧಾನಿ ಮೋದಿ ಸರಕಾರ ಈ ವರ್ಷದ ಜನವರಿಯಲ್ಲಿ ‘ಭಾರತ ರತ್ನ’ ಪ್ರಶಸ್ತಿ ಘೋಷಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.