ಕೆ.ಎನ್.ಪಿ.ವಾರ್ತೆ,ಚಾಮರಾಜನಗರ,ಜೂ.12;

ಚಾಮರಾಜನಗರ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಅಮಾನವೀಯವಾಗಿ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ತಡವಾಗಿ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕು, ಕಬ್ಬೆಕಟ್ಟೆ ಗ್ರಾಮದಲ್ಲಿ ಜೂನ್ 3 ರಂದು ದಲಿತ ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿದ್ದು, ಅದರ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಚಾಮರಾಜನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈಗಾಗಲೇ ಇಬ್ಬರನ್ನು ಬಂಧಿಸಿದ್ದು, ಇನ್ನೂ ನಾಲ್ಕು ಮಂದಿ ತಲೆಮರೆಸಿಕೊಂಡಿದ್ದಾರೆ.

ಪ್ರತಾಪ್ ಎಂಬಾತನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ. ಆದರೆ ಈತ ಮಾನಸಿಕ ಅಸ್ವಸ್ಥನಾಗಿದ್ದಾನೆ. ಪ್ರತಾಪ್ ಅವರ ತಂದೆಯೇ ಆತನ ವೈದ್ಯಕೀಯ ವರದಿಗಳನ್ನು ಪೊಲೀಸರಿಗೆ ನೀಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರತಾಪ್ ಪ್ರಸ್ತುತ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಾನವೀಯವಾಗಿ ವರ್ತಿಸಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಾಪ್ ಅವರ ಸಹೋದರ ಸಂಬಂಧಿ ಕಾಂತರಾಜು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.