ಕೆ.ಎನ್.ಪಿ.ವಾರ್ತೆ,ಪುತ್ತೂರು,ಜು.17;

ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಆಂಬ್ಯುಲೆನ್ಸ್ ಗೆ ಟೆಂಪೋ ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ವಿಟ್ಲ ಸಮೀಪ ಮಿತ್ತೂರಿನಲ್ಲಿ ನಡೆದಿದೆ.

ಏಮಾಜೆ ನಿವಾಸಿ ವಾಮನ ನಾಯ್ಕ ಎಂಬವರ ಪತ್ನಿ ಪಾರ್ವತಿ ಎನ್ನುವವರು ಮೃತಪಟ್ಟಿದ್ದಾರೆ. ಅನಾರೋಗ್ಯದ ಕಾರಣ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಮನ ನಾಯ್ಕ ಅವರನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಮಿತ್ತೂರು ಸಮೀಪದ ಪರ್ಲೊಟ್ಟು ವಿನಲ್ಲಿ ಎದುರಿನಿಂದ ಬಂದ ಟೆಂಪೋ ಅಂಬ್ಯುಲೆನ್ಸ್ ಗೆ ಡಿಕ್ಕಿಯಾದ ಪರಿಣಾಮ ಅಂಬ್ಯುಲೆನ್ಸ್ ಪಲ್ಟಿಯಾಗಿ ಪಕ್ಕದ ಕಮರಿಗೆ ಬಿದ್ದಿದೆ. ಆ ವೇಳೆ ಪಾರ್ವತಿ ಸ್ಥಳದಲ್ಲೇ ಮೃತಪಟ್ಟರೆ ರೋಗಿ ವಾಮನ ನಾಯ್ಕ ಸೇರಿ ಮೂವರು ಗಾಯಗೊಂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.