ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.31;

ಅನೈತಿಕ ಸಂಬಂಧಕ್ಕೆ ಪ್ರಿಯಕರನಿಂದಲೇ ಮಹಿಳೆಯೊಬ್ಬಳು ಬಲಿಯಾಗಿರುವ ಘಟನೆ ನಗರದ ವಿದ್ಯಾರಣ್ಯಪುರ ಬಳಿಯ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ.

ಪ್ರಿಯಾಂಕಾ (24) ಕೊಲೆಯಾದ ಮಹಿಳೆ ಆಗಿದ್ದು, ಜಗದೀಶ್ ಕೊಲೆ ಮಾಡಿದ ಆರೋಪಿ. ಪ್ರಿಯಾಂಕಾ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತಿಯಿಂದ ದೂರವಾಗಿದ್ದಳು. ಗಂಡನಿಲ್ಲದ ಪ್ರಿಯಾಂಕಾ, ಜಗದೀಶ್ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎನ್ನಲಾಗಿದೆ.

ಸೋಮವಾರ ಯಾವುದೋ ವಿಚಾರವಾಗಿ ಪ್ರಿಯಾಂಕಾ ಹಾಗೂ ಜಗದೀಶ್ ನಡುವೆ ಜಗಳವಾಗಿತ್ತು. ಈ ವೇಳೆ ಆರೋಪಿ ಜಗದೀಶ್, ಪ್ರಿಯಾಂಕಾ ಮೇಲೆ ಹಲ್ಲೆ ಮಾಡಿದ್ದನು. ಹಲ್ಲೆಯಿಂದ ಪ್ರಿಯಾಂಕಾ ಅಸ್ವಸ್ಥಗೊಂಡ ಹಿನ್ನೆಲೆ ಬುಧವಾರ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಪರೀಕ್ಷೆ ನಡೆಸಿದ ವೈದ್ಯರು ಪ್ರಿಯಾಂಕಾ ಮೃತಪಟ್ಟಿದ್ದಾಳೆ ಎಂದು ತಿಳಿಸಿದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರ ಪೊಲೀಸರು ಆರೋಪಿ ಜಗದೀಶ್‍ನನ್ನು ಬಂಧಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.