ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ನ.24;

ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಯನ್ನು ರಚಿಸಲು ಈಗಾಗಲೇ ದಿನಾಂಕ ಘೋಷಣೆಯಾಗಿದೆ ಎಂದು ಹೊಸಪೇಟೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಹೇಳಿದ್ದಾರೆ.

ಉಪ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ವಿಜಯನಗರ ಜಿಲ್ಲೆ ಸ್ಥಾಪನೆಯಾಗುವುದು ಪಕ್ಕಾ ಆದಂತಾಗಿದೆ.
ಜನೇವರಿ 11 ರಂದು ಪ್ರತ್ಯೇಕ ವಿಜಯನಗರ ಜಿಲ್ಲೆಯ ನಾಮಕರಣವಾಗಲಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರೇ ವಿಜಯನಗರ ಜಿಲ್ಲೆ ಗೆ ಚಾಲನೆ ನೀಡಲಿದ್ದಾರೆ. ಮುಂದಿನ ಬಾರಿ ನಡೆಯುವ ‘ಹಂಪಿ ಉತ್ಸವ’ ವನ್ನು ಇನ್ನು ಮುಂದೆ ‘ವಿಜಯನಗರ ಉತ್ಸವ’ವನ್ನಾಗಿ ಬದಲಾಯಿಸಲಾಗುವುದು, ಹಳೆಯ ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಮರುಕಳಿಸುವಂತೆ ಮಾಡಲಾಗುವುದು ಎಂದು ಆನಂದ್ ಸಿಂಗ್ ತಿಳಿಸಿದ್ದಾರೆ.

ನಾನು ಮೈತ್ರಿ ಸರ್ಕಾರದಲ್ಲಿ ರಾಜೀನಾಮೆ ಕೊಡಲು ಇದೂ ಒಂದು ಕಾರಣ. ಕೊನೆಗೂ ನನ್ನ ಆಸೆ ಈಡೇರಿದೆ. ವಿಜಯನಗರ ಜಿಲ್ಲೆಯಾಗಬೇಕು ಮತ್ತು ಅಭಿವೃದ್ಧಿಯಾಗಲು ರಾಜೀನಾಮೆ ಕೊಡಬೇಕಾಗಿ ಬಂತು. ಈ ಸಂದರ್ಭದಲ್ಲಿ ಯಡಿಯೂರಪ್ಪರಿಗೆ ಅನಂತ ಧನ್ಯವಾದಗಳನ್ನು ತಿಳಿಸುತ್ತೇನೆ, ಅವರ ನಾಯಕತ್ವದಲ್ಲಿ ಅಭಿವೃದ್ದಿ ಪರ್ವ ಶುರುವಾಗಲಿದೆ ಎಂದು ಹೇಳಿದರು.

ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಆನಂದ್​ ಸಿಂಗ್​ ಹೋರಾಟಕ್ಕಿಳಿದಿದ್ದರು. ಇತ್ತೀಚೆಗೆ, ವಿಜಯನಗರ ನೂತನ‌ ಜಿಲ್ಲೆ ಆಗಿಯೇ ಆಗುತ್ತದೆ.

ಇದನ್ನು ನಾವು ನಿರ್ಧರಿಸಿಲ್ಲ. ಹಂಪಿ ಶ್ರೀವಿರೂಪಾಕ್ಷೇಶ್ವರ ದೇವರೇ ಇದನ್ನು ನಿರ್ಣಯಿಸಿದ್ದಾರೆ. ವಿಜಯನಗರ ಜಿಲ್ಲೆ ಆಗೋದು ಬೇಡ ಎಂಬುದು ಅವರವರ ನಿರ್ಧಾರ ಎಂದು ಹೇಳಿದ್ದರು.

ಬಳ್ಳಾರಿ ಜಿಲ್ಲೆಯಿಂದ 6 ತಾಲೂಕುಗಳನ್ನು ಬೇರ್ಪಡಿಸುವ ಪ್ರಸ್ತಾಪ ಕೇಳಿಬಂದಿತ್ತು. ಭೌಗೋಳಿಕವಾಗಿ ಜಿಲ್ಲೆಯನ್ನು ಬೇರ್ಪಡಿಸಿ ಮ್ಯಾಪ್ ಸಿದ್ಧಪಡಿಸಲಾಗಿದ್ದು, ವಿಜಯನಗರ ಜಿಲ್ಲೆ ವ್ಯಾಪ್ತಿಗೆ ಹೊಸಪೇಟೆ, ಹಗರಿ ಬೊಮ್ಮನಹಳ್ಳಿ, ಹೂವಿನ ಹಡಗಲಿ, ಕೊಟ್ಟೂರು, ಹರಪನಹಳ್ಳಿಯನ್ನು ಸೇರಿಸಲಾಗಿದೆ. ಬಳ್ಳಾರಿ ಜಿಲ್ಲೆಯ ವ್ಯಾಪ್ತಿಗೆ ಬಳ್ಳಾರಿ, ಸಿರಗುಪ್ಪ, ಕೂಡ್ಲಿಗಿ, ಸಂಡೂರು, ಕುರಗೋಡು ತಾಲೂಕುಗಳು ಉಳಿಯಲಿವೆ ಎಂಬ ಮಾತುಗಳು ಕೇಳಿಬಂದಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.