ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.13;

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ 17 ಶಾಸಕರ ಅನರ್ಹತೆಯ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದೆ.

17 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಅಂದಿನ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಆದೇಶವನ್ನು ಎತ್ತಿ ಹಿಡಿದಿದೆ.

ಶಾಸಕರ ನಡೆಗೆ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್‌ ಶಾಸಕರ ನಡೆಯನ್ನು ಪ್ರೋತ್ಸಾಹಿಸುವುದಿಲ್ಲ. ವಿಪಕ್ಷ ಮತ್ತು ಅಧಿಕಾರದಲ್ಲಿರುವ ಪಕ್ಷಗಳಿಗೆ ನೈತಿಕತೆ ಇರಬೇಕು ಎಂದಿದೆ.

17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ 2023ರವರೆಗೆ ಅಂದರೆ ವಿಧಾನಸಭೆ ಅವಧಿ ಮುಗಿಯವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ.

ಹೀಗಾಗಿ ಉಪ ಚುನಾವಣೆಯಲ್ಲಿ ಅನರ್ಹಗೊಂಡ ಶಾಸಕರು ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಆದರೆ ಉಪ ಚುನಾವಣೆಯಲ್ಲಿ ಗೆದ್ದ ನಂತರವಷ್ಟೇ ಬಿಎಸ್‌ವೈ ಸಂಪುಟದಲ್ಲಿ ಮಂತ್ರಿಯಾಗಬಹುದು ಎಂಬ ಕಟ್ಟಳೆಯನ್ನು ವಿಧಿಸಿದೆ.

ಕಾಂಗ್ರೆಸ್ 14, ಜೆಡಿಎಸ್ ನ 3 ಶಾಸಕರನ್ನು ಕಳೆದ ಜುಲೈ ತಿಂಗಳಿನಲ್ಲಿ ಆಗಿನ ಸ್ಪೀಕರ್ ಆಗಿದ್ದ ಕೆ.ಆರ್.ರಮೇಶ್ ಕುಮಾರ್ ಅವರು ಅನರ್ಹಗೊಳಿಸಿದ್ದರು.

ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲಿ ರಮೇಶ್ ಕುಮಾರ್ ಅವರು ಈ ಶಾಸಕರನ್ನು ಅನರ್ಹಗೊಳಿಸಿದ್ದರು. ಅನರ್ಹತೆಯನ್ನು ಪ್ರಶ್ನಿಸಿ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಕ್ತಾಯವಾಗಿದ್ದು, ಇಂದು ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.