ಕೆ.ಎನ್.ಪಿ.ವಾರ್ತೆ,ವಿಜಯವಾಡ,ಜೂ.07;

ಆಂಧ್ರ ಪ್ರದೇಶದಲ್ಲಿ ಕೇಂದ್ರ ತನಿಖಾ ಸಂಸ್ಥೆ -ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದ ಈ ಹಿಂದಿನ ಚಂದ್ರಬಾಬು ನಾಯ್ಡು ಸರ್ಕಾರದ ಆದೇಶವನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ರದ್ದುಗೊಳಿಸಿದೆ.

ಆಂಧ್ರಪ್ರದೇಶದಲ್ಲಿ ಸಿಬಿಐ ತನಿಖೆಗೆ ಅನುಮತಿ ನಿರಾಕರಿಸಿದ್ದ ಚಂದ್ರಬಾಬು ನಾಯ್ಡು ಆದೇಶವನ್ನು ನೂತನ ಮುಖ್ಯಂಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ರದ್ದುಪಡಿಸಿದ್ದು, ಈ ಮೂಲಕ ಆಂಧ್ರಪ್ರದೇಶದಲ್ಲಿ ಸಿಬಿಐ ತನಿಖೆ ನಡೆಸಲು ಅನುಮತಿ ನೀಡಲಾಗಿದೆ.

ಕಳೆದ ವರ್ಷ ನವೆಂಬರ್ 8 ರಂದು ಕೇಂದ್ರ ಸರ್ಕಾರಿ ಅಧಿಕಾರಿಗಳು, ಕೇಂದ್ರ ಸಂಸ್ಥೆಗಳು, ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಲು, ಶೋಧ ಕಾರ್ಯಾಚರಣೆ ನಡೆಸಲು ಇದ್ದಂತಹ ಒಪ್ಪಂದವನ್ನು ಹಿಂತೆಗೆದುಕೊಂಡಿತ್ತು. ಮೇ 30 ರಂದು ಅಧಿಕಾರಕ್ಕೆ ಬಂದ ವೈಎಸ್ ಆರ್ ಕಾಂಗ್ರೆಸ್ ಪಕ್ಷ ನವೆಂಬರ್ 8 ರಂದು ಚಂದ್ರಬಾಬು ನಾಯ್ಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ ನಿರ್ದೇಶನದ ಮೇರೆಗೆ ವಿಶೇಷ ಮುಖ್ಯ ಕಾರ್ಯದರ್ಶಿ ಮನಮೋಹನ್ ಸಿಂಗ್ ಈ ಆದೇಶ ಪ್ರಕಟಿಸಿದ್ದಾರೆ.

ದೆಹಲಿ ವಿಶೇಷ ಪೊಲೀಸ್ ರಚನಾ ಕಾಯ್ದೆ 1946 ರ ವಿನಾಯಿತಿ ಅಡಿಯಲ್ಲಿ ಕಳೆದ ವರ್ಷ ನವೆಂಬರ್ 8 ರಂದು ಹೊರಡಿಸಲಾದ ಸರ್ಕಾರದ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದರಿಂದಾಗಿ ಆಂಧ್ರ ಪ್ರದೇಶದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸಲು ಸಿಬಿಐಗೆ ಎಲ್ಲಾ ರೀತಿಯ ಅಧಿಕಾರ ಸಿಕ್ಕಂತಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.