ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.17;

ಸುರಕ್ಷತೆಯ ದೃಷ್ಟಿಯಿಂದ ಸೆಪ್ಟೆಂಬರ್‌ ಅಂತ್ಯದೊಳಗೆ ಎಟಿಎಂಗಳನ್ನು ಗೋಡೆ, ಪಿಲ್ಲರ್‌ ಅಥವಾ ನೆಲಕ್ಕೆ ಭದ್ರವಾಗಿ ಅಳವಡಿಸುವಂತೆ ಆರ್‌ಬಿಐ ಎಲ್ಲ ಬ್ಯಾಂಕ್‌ಗಳಿಗೆ ಸೂಚಿಸಿದ್ದು, ಏರ್‌ಪೋರ್ಟ್‌ನಂಥ ಹೆಚ್ಚಿನ ಭದ್ರತಾ ಏರ್ಪಾಡು ಇರುವ ಸ್ಥಳಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಈ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದೆ.

ಎಟಿಎಂಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಟಿಎಂಗಳ ಸುರಕ್ಷತೆಗಾಗಿ ಈ ಆದೇಶವೊಂದನ್ನು ಹೊರಡಿಸಿದೆ.

ಸೆಪ್ಟಂಬರ್ ಒಳಗೆ ಎಲ್ಲಾ ಬ್ಯಾಂಕುಗಳ ಎಟಿಎಂ ಮೆಷಿನ್ ಗಳನ್ನು ಗೋಡೆಗೆ ಅಳವಡಿಸುವಂತೆ ಆರ್.ಬಿ.ಐ ಸೂಚಿಸಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವಂತೆ ಹಾಗೂ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ಸೂಚನೆ ನೀಡಿದೆ.

ಆದರೆ ವಿಮಾನ ನಿಲ್ದಾಣಗಳಂತಹ ಹೆಚ್ಚಿನ ಭದ್ರತೆ ಇರುವ ಪ್ರದೇಶಗಳಿಗೆ ಇದು ಅನ್ವಯಿಸುವುದಿಲ್ಲ. ಏಕೆಂದರೆ ಅಲ್ಲಿ ರಾಜ್ಯ ಅಥವಾ ಕೇಂದ್ರ ಸುರಕ್ಷತಾ ಸಿಬ್ಬಂದಿಯೂ ಇರುತ್ತಾರೆ ಎಂಬುದಾಗಿ ತಿಳಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.