ಕೆ.ಎನ್.ಪಿ.ವಾರ್ತೆ,ಹಾಸನ,ಆ.10;

ಹಾಸನ ಜಿಲ್ಲೆಯ ಸಕಲೇಶಪುರ ಸೇರಿದಂತೆ ಇತರೆ ಕಡೆ ಮಳೆ ಅಭ೯ಟ ಹೆಚ್ಚಾಗಿ ಭೂ ಕುಸಿತ, ಮರ, ವಿದ್ಯುತ್ ಕಂಬ ಉರುಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಬಂದ್ ಮಾಡಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಇಂದು ಆದೇಶ ಹೊರಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಾಗ೯ದಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ, ತುತು೯ ಸಮಯದಲ್ಲಿ ಮಾತ್ರ ಲಘು ವಾಹನಗಳಿಗೆ ಅವಕಾಶ ನೀಡಲಾಗುವುದು ಎಂದರು. ಹಾಸನ ಜಿಲ್ಲೆಯಲ್ಲಿ ‌ಮಳೆ‌ ಮುಂದುವರಿದಿರುವುದರಿಂದ ಜಿಲ್ಲೆಯ‌ 6 ತಾಲ್ಲೂಕುಗಳ ಶಾಲಾ ‌ಕಾಲೇಜುಗಳಿಗೆ ನಾಳೆಯೂ ರಜೆ‌ ನೀಡಲಾಗಿದೆ ಎಂದು ಅವರು ತಿಳಿಸಿದರು.

ಶುಕ್ರವಾರ ದಿಂದ ಆ.12ರವರೆಗೆ ಸಂಜೆ ಏಳರಿಂದ ಮುಂಜಾನೆ ಏಳರವರೆಗೆ ಅಗತ್ಯ ವಸ್ತುಗಳ ಕಾಯ್ದೆಯಡಿ ಬರುವ ಸಾಮಗ್ರಿಗಳ ವಾಹನ, ಷರತ್ತು ಬದ್ದ ಸಾರ್ವಜನಿಕ ಬಸ್ ಸಂಚಾರ ಹೊರತು ಇತರೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಈ ಮಾರ್ಗವಾಗಿ ಸಂಚರಿಸುವ ವಾಹನ ಚಾಲಕರು ಔಷದಿ, ಪ್ರಥಮ ಚಿಕಿತ್ಸೆ ಪಕರಣಗಳು, ಬೇಕಾದಷ್ಟು ಆಹಾರ ಸಾಮಗ್ರಿ, ಕುಡಿಯುವ ನೀರು, ವಾಹನ ಪರವಾನಗಿ ದಾಖಲಾತಿ ಇನ್ನೂ ಮೊದಲಾದವನ್ನು ಕಡ್ಡಾಯವಾಗಿ ಇರಿಸಿಕೊಳ್ಳತಕ್ಕದ್ದು. ಹಾಗೆಯೇ ತಪಾಸಣಾಧಿಕಾರಿಗಳಿಗೆ ತಪಾಸಣೆ ವೇಳೆ ದಾಖಲಾತಿಗಳನ್ನು ಕಡ್ಡಾಯ ಪರಿಶೀಲನೆಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.