ಅಯೋಧ್ಯೆ ರಾಮನ ಪಾಲು : ಮಂದಿರ ನಿರ್ಮಾಣಕ್ಕೆ ‘ಸುಪ್ರೀಂ’ ಅಸ್ತು.

ರಾಮಜನ್ಮಭೂಮಿ ಪ್ರಕರಣದ ವಿವಾದ ವಿಚಾರದಲ್ಲಿ ಸುಪ್ರೀಂಕೋರ್ಟ್​ ಇಂದು ತೀರ್ಪು ಪ್ರಕಟ ಮಾಡಿದ್ದು, ಎಲ್ಲಾ ಧರ್ಮವನ್ನೂ ಗೌರವಿಸುವುದಾಗಿ ಹೇಳಿದ ಸುಪ್ರೀಂ ಕೋರ್ಟ್​ನ ಸಾಂವಿಧಾನಿಕ ಪೀಠ, ಕೇವಲ ನಂಬಿಕೆಗಳಿಂದ ಭೂಮಿಯ ಹಕ್ಕುದಾರಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಸಾಕಷ್ಟು ಹೋರಾಟದ ಬಳಿಕ ವಿವಾದಿತ ಅಯೋಧ್ಯೆ ಭೂಮಿ ಕೊನೆಗೂ ಅಯೋಧ್ಯೆ ರಾಮನ ಪಾಲು, ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ.

ಕೇವಲ ನಂಬಿಕೆಗಳಿಂದಷ್ಟೇ ಭೂಮಿಯ ಹಕ್ಕುದಾರಿಕೆ ನೀಡಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂಕೋರ್ಟ್, ಹಿಂದೂಗಳಿಗೆ ಕೆಲ ಷರತ್ತುಗಳನ್ನು ವಿಧಿಸಿ ಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದೆ.

ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿರುವ ನ್ಯಾಯಾಲಯ, ಮುಸ್ಲಿಂ ಸಮುದಾಯಕ್ಕೆ ಬದಲಿ ಜಾಗ ನೀಡಲು ಆದೇಶಿಸಿದೆ.

ವಿವಾದಿತ ಅಯೋಧ್ಯೆ ಜಾಗವನ್ನು ರಾಮಲಲ್ಲಾಗೆ ನೀಡಿರುವ ನ್ಯಾಯಾಲಯ, ರಾಮಲಲ್ಲಾಗೆ ಮಂದಿರ ನಿರ್ಮಾಣದ ಹಕ್ಕಿಲ್ಲ ಎಂದು ಹೇಳಿದೆ.

ವಿವಾದಿತ ಜಾಗವನ್ನು ಕೇಂದ್ರ ಸರ್ಕಾರಕ್ಕೆ ಒಪ್ಪಿಸಬೇಕು. ಕೇಂದ್ರ ಸರ್ಕಾರ ಮೂರು ತಿಂಗಳ ಒಳಗೆ ಟ್ರಸ್ಟ್ ರಚಿಸಬೇಕು. ಬಳಿಕ ಈ ಪ್ರದೇಶ ಟ್ರಸ್ಟ್’ಗೆ ಹಸ್ತಾಂತರವಾಗಲಿದೆ. ಟ್ರಸ್ಟ್ ಮೇಲುಸ್ತುವಾರಿಯಲ್ಲೇ ಮಂದಿರ ನಿರ್ಮಾಣವಾಗಬೇಕು. ಇದರಲ್ಲಿ ಬೇರೆ ಯಾರೂ ತಲೆ ಹಾಕುವಂತಿಲ್ಲ ಎಂದು ತಿಳಿಸಿದೆ.

ಜಾಗದ ಹಕ್ಕುದಾರಿಕೆಗೆ ಅರ್ಜಿ ಹಾಕಿದ್ದ ಸುನ್ನಿ ವಕ್ಫ್ ಬೋರ್ಡ್’ಗೆ 5 ಎಕರೆ ಪರ್ಯಾಯ ಜಾಗ ನೀಡಬೇಕು. ಇಲ್ಲಿ ಮಸೀದಿ ನಿರ್ಮಾಣ ಮಾಡಬೇಕೋ ಅಥವಾ ಬೇಡವೋ ಎಂಬುದು ಸುನ್ನು ವಕ್ಫ್ ಬೋರ್ಡ್’ಗೆ ಬಿಟ್ಟಿದ್ದು, ಪರ್ಯಾಯ ಜಾಗವನ್ನು ಸುನ್ನಿ ಅವಶ್ಯಕತೆಗೂ ಬಳಸಿಕೊಳ್ಳಬಹುದು ಎಂದಿದೆ.

ಏನಿದು ಪ್ರಕರಣ?:

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಇದ್ದ ಜಾಗದ 2.77 ಎಕರೆ ವಿವಾದಿತ ಭೂಮಿ ಯಾರಿಗೆ ಸೇರಿದ್ದು ಎಂಬುದೇ ಈಗ ಈ ಪ್ರಕರಣದ ವಸ್ತುವಾಗಿದೆ. 1528 ಶ್ರೀರಾಮ ಹುಟ್ಟಿದ ಸ್ಥಳ ಎಂದು ನಂಬಲಾಗುವ ಅಯೋಧ್ಯೆಯಲ್ಲಿ ಬಾಬರ್‌ ಮಸೀದಿ ನಿರ್ಮಾಣ ಮಾಡಿದ್ದ. ರಾಮ ಮಂದಿರ ಕೆಡವಿ ದೇವಾಲಯ ನಿರ್ಮಿಸಲಾಗಿದೆ ಎಂಬುದು ಆರೋಪ.

ಇದು ಸುಳ್ಳು. ಬಾಬ್ರಿ ಮಸೀದಿ ಜಾಗ ತಮಗೆ ಸೇರಿದ್ದು ಎಂಬುದು ಸುನ್ನಿ ವಕ್ಫ್ ಮಂಡಳಿಯ ವಾದ. ಹಾಗೆಯೇ ನಿರ್ಮೋಹಿ ಅಖಾಡ ಕೂಡ ಇದು ತನಗೆ ಸೇರಿದ್ದೆಂದು ಹೇಳುತ್ತಿದೆ.

2010ರಲ್ಲಿ ಅಲಾಹಾಬಾದ್ ಉಚ್ಚ ನ್ಯಾಯಾಲಯವು ಈ ಮೂರೂ ಗುಂಪುಗಳಿಗೆ ವಿವಾದಿತ ಭೂಮಿಯನ್ನು ಸಮಾನವಾಗಿ ಹಂಚುವ ತೀರ್ಪು ನೀಡಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಹಲವು ಮೇಲ್ಮನವಿಗಳು ದಾಖಲಾದವು. ಈಗ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ನ್ಯಾಯಪೀಠವು ಇದರ ವಿಚಾರಣೆ ನಡೆಸಿ, ತೀರ್ಪು ನೀಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.