ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.09;

ಅಯೋಧ್ಯೆ ತೀರ್ಪು ಹೊರಬೀಳಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಯೋಧ್ಯೆ ತೀರ್ಪು ಇಂದು ಸುಪ್ರೀಂ ಕೋರ್ಟ್ ಪ್ರಕಟಿಸಲಿರುವುದರಿಂದ ಮುಂಜಾಗೃತ ಕ್ರಮವಾಗಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹಿಂದೂ-ಮುಸ್ಲಿಂ ಸಮುದಾಯದ ಭಾವನಾತ್ಮಕ ವಿಚಾರವಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆ ತೀರ್ಪು : ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅಯೋಧ್ಯೆ ತೀರ್ಪು ಹಿನ್ನಲೆ ರಾಜ್ಯಾದ್ಯಂತ ಎಲ್ಲಾ ಕೋಮು ಸೂಕ್ಷ್ಮ ಜಿಲ್ಲೆಗಳಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ಥ್ ಕೈಗೊಳ್ಳಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.