ಕೆ.ಎನ್.ವಾರ್ತೆ,ನವದೆಹಲಿ,ಆ.03;

ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಆಗಸ್ಟ್ 06 ರಿಂದ ಪ್ರತಿದಿನ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಈ ಮೊದಲು ತಿಳಿಸಿತ್ತು.

ಆ ಹಿನ್ನೆಲೆಯಲ್ಲಿ ಮೂವರು ಸಂಧಾನಕಾರರನ್ನು ಸುಪ್ರೀಂಕೋರ್ಟ್ ನೇಮಿಸಿತ್ತು. ಈ ತ್ರಿಸದಸ್ಯ ಸಮಿತಿಯಲ್ಲಿ ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ಶ್ರೀ ರವಿಶಂಕರ್ ಗುರೂಜಿ ಮತ್ತು ಶ್ರೀರಾಮ್ ಕಂಚು ಇದ್ದರು.

ಈ ಮೂವರ ಸಮಿತಿಯು ಜುಲೈ 18 ರಂದು ಮೊದಲ ಹಂತದ ವರದಿ, ಆಗಸ್ಟ್ 01 ರಂದು ತನ್ನ ಅಂತಿಮ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಮುಂದಿರಿಸಿತ್ತು. ಆದರೆ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಇದೀಗ ಕಾನೂನಿನ ಮೂಲಕವೇ ಈ ವಿವಾದವನ್ನು ಬಗೆಹರಿಸುವುದು ಅನಿವಾರ್ಯವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.