ಕೆ.ಎನ್.ಪಿ.ವಾರ್ತೆ,ಶಿವಮೊಗ್ಗ,ಆ.05;

ರಾತ್ರಿ ವೇಳೆ ಬಹಿರ್ದೆಶೆಗೆಂದು ತೆರಳಿದ್ದ ಯುವತಿಯೊಬ್ಬಳ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಭದ್ರಾವತಿಯ ಹೊಸಮನೆ ಶಿವಾಜಿ ಸರ್ಕಲ್ ವ್ಯಾಪ್ತಿಯಲ್ಲಿನ ಕಾಳಿಂಗನಹಳ್ಳಿಯಲ್ಲಿ ನಡೆದಿದೆ.

ಇಂದಿರಾ (16) ಹತ್ಯೆಯಾದ ಯುವತಿ. ಭಾನುವಾರ ರಾತ್ರಿ ಎಲ್ಲರೂ ಮಲಗಿದ್ದ ವೇಳೆ ಈ ಘಟನೆ ನಡೆದಿದ್ದು ಬೆಳಗಿನ ಜಾವ ಅಡುಗೆಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಂದಿರಾ ಮೃತದೇಹ ಪತ್ತೆಯಾಗಿದೆ.

ಹತ್ಯೆಯಾಗಿರುವ ಇಂದಿರಾ ಭದ್ರಾವತಿಯ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದಳು. ಯುವತಿಯ ಕೊಲೆಗೆ ಕಾರಣ ಪತ್ತೆಯಾಗಿಲ್ಲ. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಕಾಂತರಾಜು, ಹಿರಿಯ ಪೋಲೀಸರು, ಶ್ವಾನದಳ ಸೇರಿ ಅನೇಕರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.