ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.01;

ಬಳ್ಳಾರಿ ಜಿಲ್ಲೆಯ ಜನರ ಶ್ರೇಯೋಭಿವೃದ್ಧಿಗಾಗಿ ಶಾಸಕ ಸ್ಥಾನ ತ್ಯಾಗ ಮಾಡುತ್ತಿರುವುದಾಗಿ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹೇಳಿದ್ದಾರೆ.

ನನ್ನ ರಾಜ್ಯದ ಜನರಿಗೆ ಉದ್ಯೋಗ ಸಿಗಬೇಕು. ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಬೇಡಿ ಎಂದು ಮನವಿ ಮಾಡಿದ್ದೆ. ಆದರೆ, ನನ್ನ ಮಾತಿಗೆ ಬೆಲೆ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದೇನೆ ಎಂದು ಶಾಸಕ ಆನಂದ್ ಸಿಂಗ್ ತಿಳಿಸಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಭಾಧ‍್ಯಕ್ಷರಿಗೆ ತಾವು ರಾಜೀನಾಮೆ ಸಲ್ಲಿಸಿದ್ದು, ಅಗತ್ಯವಿದ್ದಲ್ಲಿ ಮತ್ತೊಮ್ಮೆ ತ್ಯಾಗ ಪತ್ರ ಸಲ್ಲಿಸಲು ಸಿದ್ಧ. ಬಳ್ಳಾರಿ ಜಿಲ್ಲೆಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸದಿದ್ದರೆ ತಾವು ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದಕ್ಕೆ ಯಾವುದೇ ಪ್ರಯೋಜನವಾಗುವುದಿಲ್ಲ. ಜಿಲ್ಲೆಯ ಜನರಿಗೆ ಅನ್ಯಾಯವಾಗುತ್ತಿದ್ದು, ಆ ಬಗ್ಗೆ ಧ‍್ವನಿಯೆತ್ತುತ್ತಿದ್ದೇನೆ ಎಂದರು.

ನಮ್ಮ ನಾಯಕರಿಗೆ ಮುಜುಗರ ತರುವಂತ ಹೇಳಿಕೆ ನಾನು ನೀಡಲ್ಲ. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ನನ್ನ ತೀವ್ರ ವಿರೋಧ ಇದೆ. ಬಳ್ಳಾರಿಯ ಶಾಸಕರು ಪಕ್ಷಾತೀತವಾಗಿ ಹೋರಾಟಕ್ಕೆ ಕೈ ಜೋಡಿಸಬೇಕು. ಭೂಮಿ ಮಾರಾಟ ಮಾಡೋದು ಬೇಡ. ಬೇಕಾದರೆ ಲೀಸ್ ಮುಂದುವರೆಸಲಿ. ಇದು ಯಾವುದೇ ಆಪರೇಷನ್ ಕಮಲ ಅಲ್ಲ. ನನ್ನ ಜಿಲ್ಲೆ ಉಳಿಯಬೇಕೆಂದು ನಾನು ರಾಜೀನಾಮೆ ನೀಡಿದ್ದೇನೆ ಅಷ್ಟೆ ಎಂದು ಸ್ಪಷ್ಟಪಡಿಸಿದರು.

ವಿಜಯನಗರ ಜಿಲ್ಲೆಯಾಗಬೇಕು ಎಂಬುದು ನನ್ನ ಬೇಡಿಕೆ. ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ. ಎಲ್ಲದಕ್ಕೂ ಸಿದ್ಧ. ಬೇಡಿಕೆ ಈಡೇರಿದರೆ ಏನು ಮಾಡಬೇಕು ಎನ್ನುವುದನ್ನು ಮುಂದೆ‌ ತೀರ್ಮಾನಿಸುತ್ತೇನೆ. ಬೇಡಿಕೆ ಇಟ್ಟಿದ್ದೇನೆ. ಸರಕಾರ ಹೇಗೆ ಸ್ಪಂದಿಸುತ್ತೆ ಎಂಬುದನ್ನು ಕಾದು ನೋಡುತ್ತೇನೆ ಎಂದು ಆನಂದ್ ಸಿಂಗ್ ತಿಳಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.