ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಮೇ.23;

ಬಳ್ಳಾರಿ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ವಿಎಸ್ ಉಗ್ರಪ್ಪ ವಿರುದ್ಧ ದೇವೇಂದ್ರಪ್ಪ ಭಾರೀ ಅಂತರದ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದ ಘೋಷಣೆಯೊಂದೇ ಬಾಕಿಯಿದೆ.

ಹಾಲಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಬಿಜೆಪಿಯ ವೈ ದೇವೇಂದ್ರಪ್ಪ ನಡುವಿನ ಜಿದ್ದಾಜಿದ್ದಿನ ಪೈಪೋಟಿಯ ನಿರೀಕ್ಷೆಯಿತ್ತು. ಆದರೆ, ವೈ ದೇವೇಂದ್ರಪ್ಪ ಅವರು ಉತ್ತಮ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಬಳ್ಳಾರಿಯಲ್ಲಿ ಏಪ್ರಿಲ್ 23ರಂದು ಮತದಾನವಾಗಿತ್ತು. ಮೇ 23ರಂದು ಫಲಿತಾಂಶ ಹೊರಬಂದಿದೆ. ಬಳ್ಳಾರಿಯಲ್ಲಿ 54,475 ಮತಗಳ ಅಂತರದಿಂದ ವೈ ದೇವೇಂದ್ರಪ್ಪ ಅವರು ವಿಎಸ್ ಉಗ್ರಪ್ಪ ಅವರನ್ನು ಸೋಲಿಸಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರಗಳಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, ಈ ಪೈಕಿ ಎರಡು ಕ್ಷೇತ್ರಗಳನ್ನು ಬಿಟ್ಟರೆ ಮಿಕ್ಕೆಲ್ಲಾ ಕ್ಷೇತ್ರಗಳು ಪರಿಶಿಷ್ಟ ಜಾತಿ(ಎಸ್ ಸಿ) ಅಥವಾ ಪರಿಶಿಷ್ಟ ಪಂಗಡ(ಎಸ್ ಟಿ)ಕ್ಕೆ ಸೇರಿದ್ದಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.