ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.26;

ರಾತ್ರಿ ಮಲಗಿದ್ದ ವೇಳೆ ಮನೆಯ ಮೇಲ್ಛಾವಣಿ ಕುಸಿದು ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗದಲ್ಲಿ ನಡೆದಿದೆ.

ನಾಡಂಗ ಗ್ರಾಮದ ಖಾದರ್ ಬಾಷಾ ಎಂಬುವರ ಕಚ್ಚಾಮನೆಯು ಏಕಾಏಕಿ ಕುಸಿತ ಕಂಡಿದ್ದು, ಮನೆಯೊಳಗೆ ಮಲಗಿದ್ದ ಇಮಾಮ್ ಬೀ (45), ಹಸೀನಾ (25), ಇಮ್ರಾನ್ (3) ಮನೆಯ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.

ಆಗಾಗ ಮಳೆ ಸುರಿದ ಪರಿಣಾಮ ಈ ಮನೆಯು ಶಿಥಿಲಾವಸ್ಥೆಗೆ ತಲುಪಿದ್ದು, ಉಳಿದುಕೊಳ್ಳಲು ಬೇರೆ ಸೂರಿಲ್ಲದೇ ಅದೇ ಮನೆಯಲ್ಲೇ ನಿನ್ನೆ ರಾತ್ರಿ ಈ ಮೂವರು ಮಲಗಿದ್ದರು. ರಾತ್ರಿ 12ಗಂಟೆಯ ಸುಮಾರಿಗೆ ಕಚ್ಚಾಮನೆಯು ಸಂಪೂರ್ಣವಾಗಿ ಕುಸಿದಿದೆ. ಅದೃಷ್ಟ ವಶಾತ್ ತಾಯಿಯ ಪಕ್ಕದಲ್ಲಿ ಮಲಗಿದ್ದ ಹಸುಗೂಸು ದುರಂತದಿಂದ ಪಾರಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.