ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಜು.25;

ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

ಬಂಡಿಹರ್ಲಾಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಜನಜಾಗೃತಿ ಜಾಥಾ, ಸ್ವಚ್ಛತೆ ಕುರಿತು ಪ್ರಬಂಧ, ಚಿತ್ರಕಲೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

ಶಾಲಾ ಕಾಲೇಜು, ಅಂಗನವಾಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಶಾಲಾ ಮಕ್ಕಳು ಮತ್ತು ಯುವಕರೊಂದಿಗೆ ಸ್ವಚ್ಚತೆ ಕಾರ್ಯ, ಶ್ರಮಧಾನ ಮಾಡುತ್ತ ದಾರಿಯುದ್ದಕ್ಕೂ ಸ್ವಚ್ಚತಾ ಘೋಷಣಾ ವ್ಯಾಕ್ಯಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ವೈದ್ಯಾಧಿಕಾರಿ ಡಾ.ಮಹೇಶ ಗೊಂಡಬಾಳ, ಇಂದಿನಿಂದ ಏಳು ದಿನಗಳ ಕಾಲ ಸ್ವಚ್ಛತಾ ಸಪ್ತಾಹದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲಾಗುವುದು. ಸ್ವಚ್ಛತೆ ಕುರಿತು ಪ್ರಬಂಧ, ಚಿತ್ರಕಲೆ, ಜಾಗೃತಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವಚ್ಛತೆ ಕುರಿತು ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಮಲಮ್ಮ ಗೊಲ್ಲರ, ಉಪಾಧ್ಯಕ್ಷ ಚನ್ನಕೃಷ್ಣ, ಮುಖಂಡ ಕಾಷಯ್ಯ ಸ್ವಾಮಿ, ಗವಿಮಠ ಶಿಕ್ಷಕ ಬಸರಾಜ ಬಾರಕೇರ, ಸಿಬ್ಬಂದಿ, ಆಶಾ ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.