ಕೆ.ಎನ್.ಪಿ.ವಾರ್ತೆ,ಧಾರವಾಡ,ಜೂ.27;
ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಬೀಡಿ ಕಾರ್ಮಿಕರು, ಸುಣ್ಣ ಹಾಗೂ ಇತರೆ ಗಣಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳು ಅರ್ಜಿಗಳನ್ನು ಕಡ್ಡಾಯವಾಗಿ ರಾಷ್ಟ್ರೀಯ ಸ್ಕಾಲರ್‍ಶಿಪ್ ಪೋರ್ಟಲ್ scholarships.gov.in ಮೂಲಕ ಆನ್‍ಲೈನ್‍ನಲ್ಲಿ ಸಲ್ಲಿಸಬೇಕು.
1 ರಿಂದ 10 ನೇ ತರಗತಿ ವರೆಗಿನ ಮೆಟ್ರಿಕ್ ಪೂರ್ವ ತರಗತಿಗಳ ವಿದ್ಯಾರ್ಥಿಗಳು ಸೆಪ್ಟೆಂಬರ್ 30 ರೊಳಗಾಗಿ ಹಾಗೂ 11 ನೇ ತರಗತಿಯಿಂದ ಮೇಲ್ಟಟ್ಟ ಮೆಟ್ರಿಕ್ ನಂತರದ ಎಲ್ಲ ತರಗತಿಗಗಳ ವಿದ್ಯಾರ್ಥಿಗಳು ಅಕ್ಟೊಬರ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಯಾವುದೇ ಮಾಹಿತಿ ಹಾಗೂ ವಿವರಗಳಿಗೆ 080-23471406 ಇಲ್ಲವೇ ಧಾರವಾಡದ ಗಾಂಧೀಚೌಕ್‍ನಲ್ಲಿರುವ ಬೀಡಿ ವರ್ಕರ್ಸ್ ವೆಲ್‍ಫೇರ್ ಫಂಡ್‍ನ ಚಿಕಿತ್ಸಾಲಯಕ್ಕೆ ಖುದ್ದಾಗಿ ಭೇಟಿ ನೀಡಬಹುದು. ಅಥವಾ ದೂರವಾಣಿ ಸಂಖ್ಯೆ: 0836-2441299ಯನ್ನು ಸಂಪರ್ಕಿಸಬಹುದು ಎಂದು ವೈದ್ಯಾಧಿಕಾರಿ ಡಾ.ರಿಂದಾ.ವ್ಹಿ.ನಾವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಚಂದ್ರು ಹಿರೇಮಠ ಧಾರವಾಡ
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.