ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಆ.05;

ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಬೆಳಗಾವಿ ಜಿಲ್ಲೆಗೆ ಸುಮಾರು ಎರಡೂವರೆ ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿರುವುದರ ಜೊತೆಗೆ, ನಗರದಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣ ಹಾಗೂ ಅದರ ಉಪ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ನಿನ್ನೆ ಸಂಜೆ ಖಾನಾಪುರ ತಾಲೂಕಿನ ಲೋಂಡಾ ಸಮೀಪ ರೈಲ್ವೆ ಟ್ರ್ಯಾಕ್ ನಲ್ಲಿ ಮಣ್ಣು ಕುಸಿದಿದ್ದು, ರೈಲ್ವೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ರೈಲ್ವೆಅಧಿಕಾರಿಗಳು, ಇಂಜಿನಿಯರ್ ಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಈ ನಡುವೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ದತ್ತವಾಡ ರಸ್ತೆಯಲ್ಲೂ ಭೂಕುಸಿತ ಸಂಭವಿಸಿದೆ. ಇದರಿಂದ ಸಂಚಾರಕ್ಕೆ ತೊಂದರೆಯುಂಟಾಯಿತು. ಇನ್ನೂ ಹಲವು ಕಡೆಗಳಲ್ಲಿ ಭೂ ಕುಸಿತದ ಆತಂಕ ಎದುರಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.