ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಜೂ.25;

ನಿಪ್ಪಾಣಿ ತಾಲ್ಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ನಿಪ್ಪಾಣಿಯ ಎಂ.ಜಿ.ಎಂ.‌ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಲಾರಿ ಹಾಗೂ ಬೊಲೇರೊ ಸರಕು ಸಾಗಣೆ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ 5 ಮಂದಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಮೃತರನ್ನು ನದೀಂ, ರಾಜು, ಅಹಮದ್, ಶಬ್ಬೀರ್, ರಮೇಶ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನಿಪ್ಪಾಣಿ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಡಿಕ್ಕಿಯಾದ ವಾಹನಗಳು ಜಖಂಗೊಂಡಿವೆ.

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.