ಕೆ.ಎನ್.ಪಿ.ವಾರ್ತೆ,ಸುಳ್ಯ,ಜು.15;

ಕೆಎಸ್‌ಆರ್‌ಟಿಸಿ ಬಸ್, ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಮೂವರು ದಾರುಣ ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಸಮೀಪ ಅರಂಬೂರಿನಲ್ಲಿ ನಡೆದಿದೆ.

ಘಟನೆಯಲ್ಲಿ ರಾಮನಗರ ಜಿಲ್ಲೆಯ ನಿವಾಸಿಗಳಾದ ಮಂಜುಳಾ, ಸೋಮಣ್ಣ ಮತ್ತು ನಾಗೇಂದ್ರ ಎಂಬುವವರು ಮೃತಪಟ್ಟಿದ್ದಾರೆ. ಇದರಲ್ಲಿ ಮಹಿಳೆ ಮಂಜುಳಾ ಚೆನ್ನಪಟ್ಟಣ ತಾಲೂಕು ಕೋಲೂರು ಮದುಗೆರೆಯವರೆಂದು ಪತ್ತೆಯಾಗಿದೆ.

ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳ್ಳೇಗಾಲ ಡಿಪೋಗೆ ಸೇರಿದ್ದ ಬಸ್ ಮಂಗಳೂರಿನಿಂದ ಮಡಿಕೇರಿ ಮಾರ್ಗದಲ್ಲಿ ಕೊಳ್ಳೇಗಾಲಕ್ಕೆ ತೆರಳುತ್ತಿತ್ತು. ರಿಡ್ಜ್ ಕಾರು ಮಂಗಳೂರಿನತ್ತ ಧಾವಿಸುತ್ತಿತ್ತು. ಆಗ ಆಟೋ ರಿಕ್ಷಾ ಒಂದನ್ನು ಓವರ್ ಟೇಕ್ ಮಾಡಲು ಕಾರು ಚಾಲಕ ಮುಂದಾಗಿದ್ದಾನೆ. ಆಗ ಕಾರು ಸರ್ಕಾರಿ ಬಸ್ ಗೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸುಳ್ಯ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ತನಿಖೆ ಕೈಗೊಂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.