ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.23;

ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್ ವಿಭಾಗದ ನಡುವೆ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ಏಳು ರೈಲುಗಳನ್ನು ರದ್ದುಪಡಿಸುವುದಾಗಿ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಗುರುವಾರ ಪ್ರಕಟಿಸಿದೆ.

ಆಗಸ್ಟ್ 24 ರಂದು ಕಾರವಾರನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ರೈಲು ಸಂಖ್ಯೆ 16516 ಕಾರವಾರ್-ಯಶವಂತಪುರ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16518/16524 ಕಣ್ಣೂರು / ಕಾರವಾರ್ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರದ್ದುಗೊಂಡಿದೆ.

ಆಗಸ್ಟ್ 23 ಮತ್ತು 24 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ಕೆಎಸ್‌ಆರ್ ಬೆಂಗಳೂರು – ಕಣ್ಣೂರು / ಕಾರ್ವಾರ್ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸಲಾಗಿದೆ ಎಂದು ಎಸ್‌ಡಬ್ಲ್ಯುಆರ್ ಪ್ರಕಟಣೆ ತಿಳಿಸಿದೆ. ಆ.25ರ ಯಶವಂತಪುರ – ಮಂಗಳೂರು ಮಾರ್ಗದ ರೈಲು ಕೂಡ ರದ್ದಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.