ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಮಾ.24;

ಬೈಕ್, ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಯುವಕ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಮುಸ್ಟೂರು ಗ್ರಾಮದಿಂದ ಜಗಳೂರಿಗೆ ಸಿಲಿಂಡರ್ ತರಲು ಹೋಗುತಿದ್ದ ಮಾರ್ಗಮಧ್ಯೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಜಗಳೂರು ತಾಲ್ಲೂಕಿನ ದೊಣ್ಣೆ ಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಯುವಕ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ದುರ್ಘಟನೆ ಸಂಭವಿಸಿದೆ.

ಎಂ.ಬಿ.ಬಿ.ಎಸ್ ವಿದ್ಯಾರ್ಥಿ ಕಿರಣ್ (26) ಮೃತ ದುರ್ದೈವಿ. ಯುವಕನ ತಂದೆ ತಿಪ್ಪೇಸ್ವಾಮಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜಗಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ : ಮಹಮ್ಮದ್ ಅಬ್ದುಲ್ ರಖೀಬ್