ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.09;

ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದು, ಕಮಲ ಪಕ್ಷ, ಕಮಾಲ್ ಮಾಡಿದೆ.

ರೈತರ ಪಕ್ಷವೆಂದು ಬಿಂಬಿಸಿಕೊಂಡಿದ್ದ ಜೆಡಿಎಸ್ ಉಪ ಚುನಾವಣೆಯ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಆದರೆ ಒಂದು ಕ್ಷೇತ್ರವನ್ನು ಜೆಡಿಎಸ್ ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ, ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದಾರೆ, ಕೊನೆ ಪಕ್ಷ ಯಶವಂತಪುರದಲ್ಲಿ ಜೆಡಿಎಸ್ ಗೆಲ್ಲಬಹುದೆಂಬ ನಿರೀಕ್ಷೆ ಕೂಡ ಹುಸಿಯಾಗಿದೆ.

ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿದೆ. ಕೆಆರ್ ಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾರಾಯಣ ಗೌಡ ಗೆಲುವು ಸಾಧಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.