ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.08;

ಬಿಎಂಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ರಾತ್ರಿ ವಿಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಗ್ರಹಾರ ದಾಸರಹಳ್ಳಿಯ ಆಯುಷ್(14) ಮೃತಪಟ್ಟ ವಿದ್ಯಾರ್ಥಿ. ವಿಜಯನಗರದ ಆರ್ಚಿಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಆಯುಷ್ ನಿನ್ನೆ ರಾತ್ರಿ ಮನೆಯ ಮುಂಭಾಗ ರಸ್ತೆ ದಾಟುತ್ತಿದ್ದಾಗ ವೀರೇಶ ಚಿತ್ರಮಂದಿರದ ಕಡೆಯಿಂದ ಕಾಮಾಕ್ಷಿಪಾಳ್ಯದ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಆಯುಷ್‍ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.