ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಸೆ.01;

ವಾಹನದಲ್ಲಿ ಗಣೇಶಮೂರ್ತಿ ತೆಗೆದುಕೊಂಡು ಹೋಗುವಾಗ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಭಾಗ್ಯನಗರದಲ್ಲಿ ನಡೆದಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಇಲ್ಲಿಯ ಗಣೇಶ ಮಂಡಳಿಯವರು ಟ್ರ್ಯಾಕ್ಟರ್‌ ಟ್ರಾಲಿಯಲ್ಲಿ 15 ಅಡಿಗೂ ಎತ್ತರದ ಮೂರ್ತಿ ಸಾಗಿಸುತ್ತಿದ್ದರು. ಮೂರ್ತಿಯನ್ನು ಪ್ಲಾಸ್ಟಿಕ್‌ನಿಂದ ಮುಚ್ಚಿದ್ದರು. ಮೂರ್ತಿ ವಿದ್ಯುತ್ ತಂತಿಗೆ ತಗುಲಿದಾಗ ಪ್ಲಾಸ್ಟಿಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಮೂರ್ತಿ ಸಾಗಿಸುತ್ತಿದ್ದವರು ಮಣ್ಣು ಎರಚಿ ಬೆಂಕಿ ನಂದಿಸಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸದಾಶಿವ ನಗರದಲ್ಲಿ ಇಂಥದ್ದೆ ದುರ್ಘಟನೆ ಸಂಭವಿಸಿ, 8ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರು. ಈ ಘಟನೆ ನಂತರ ಎತ್ತರದ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಲಾಗಿತ್ತು. ಆದರೆ, ನಿಯಮ ಉಲ್ಲಂಘಿಸಿ 15 ಅಡಿ ಎತ್ತರದ ಮೂರ್ತಿ ನಿರ್ಮಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.