ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.16;

ಪ್ರವಾಹದಿಂದ ತತ್ತರಿಸಿರುವ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ.

ಸಂಪುಟ ವಿಸ್ತರಣೆಗೆ ವರಿಷ್ಠರ ಒಪ್ಪಿಗೆ ಪಡೆಯುವ ಜತೆಗೆ ಪ್ರಧಾನಿ ಭೇಟಿ ಮಾಡಿ ನೆರವಿಗೆ ಮೊರೆ ಇಡಲು ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಗೃಹ ಸಚಿವ ಅಮಿತ್‌ ಶಾ ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಹೀಗಾಗಿ ಕೇಂದ್ರ ಸರಕಾರದಿಂದ ಉದಾರ ನೆರವು ಸಿಗಲಿದೆ ಎಂದು ರಾಜ್ಯ ಸರಕಾರ ನಿರೀಕ್ಷೆ ಹೊಂದಿದೆ. ಪ್ರಾಥಮಿಕ ಹಂತದಲ್ಲಿ ಕೇಂದ್ರ 3000 ಕೋಟಿ ರೂ. ನೆರವು ನೀಡುವ ಸಾಧ್ಯತೆ ಇದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.