ಕೆ.ಎನ್.ಪಿ.ವಾರ್ತೆ,ಮಂಡ್ಯ,ನ.24;

ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದ ಬಳಿ ನಾಲೆಗೆ ಖಾಸಗಿ ಬಸ್ ಉರುಳಿ ಬಿದ್ದು 25ಕ್ಕೂ ಅಧಿಕ ಪ್ರಯಾಣಿಕರು ಸಾವನ್ನಪ್ಪಿರುವ ಹಿನ್ನೆಲೆ, ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ವೇಳೆ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಘಟನೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಬರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಗ್ರಾಮೀಣ ಪ್ರದೇಶಕ್ಕೆ ಸರಕಾರದಿಂದ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕಾದ ರವಿಂದ್ರ ಶ್ರೀಕಂಠಯ್ಯ ಹಾಜರಿದ್ದರು. ನಾಲೆಯಿಂದ ಬಸ್ ಅನ್ನು ಮೇಲಕ್ಕೆತ್ತಲಾಗಿದ್ದು, ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.