ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.04;

ಉಪಚುನಾವಣೆ ನಡೆಯುತ್ತಿರುವ ರಾಜ್ಯದ ಹದಿನೈದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡಿಸೆಂಬರ್‌ 5ರಂದು ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಲ್ಲಿ ಡಿಸೆಂಬರ್ 5ರಂದು ಉಪಚುನಾವಣೆಗೆ ಮತದಾನ ನಡೆಯಲಿರುವ ಹಿನ್ನೆಲೆ ಅಂದು ಆಯಾ 15 ಕ್ಷೇತ್ರಗಳ ವ್ಯಾಪ್ತಿಗೆ ಬರುವ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.

ಅಥಣಿ, ಕಾಗವಾಡ, ಗೋಕಾಕ್‌, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್‌, ಶಿವಾಜಿನಗರ, ಹೊಸಕೋಟೆ, ಕೆ.ಆರ್‌.ಪೇಟೆ, ಹುಣಸೂರು ಕ್ಷೇತ್ರ ವ್ಯಾಪ್ತಿಯಲ್ಲಿನ ಸರಕಾರಿ ಕಚೇರಿಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಆದರೆ ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕೆಲಸ ಮಾಡುವ ಸರಕಾರಿ ನೌಕರರಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಒಂದೊಮ್ಮೆ ಈ ನೌಕರರು ಉಪಚುನಾವಣೆ ನಡೆಯುವ ಕ್ಷೇತ್ರಗಳ ನೋಂದಾಯಿತ ಮತದಾರರಾಗಿದ್ದರೆ ಮಾತ್ರ ವೇತನ ಸಹಿತ ರಜೆ ಪಡೆಯುವುದಕ್ಕೆ ಅರ್ಹರಾಗಿರುತ್ತಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.