ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.04;
ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಉಪಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಬೆಳಗ್ಗೆ 7 ರಿಂದ ಸಂಜೆ 6ರ ವರೆಗೆ ಮತದಾನ ಮಾಡಲು ಅವಕಾಶವಿದೆ. ಡಿಸೆಂಬರ್ 5ರ ಗುರುವಾರ ಮತದಾನ ಮಾಡಲು ಅನುಕೂಲವಾಗುವಂತೆ 15 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಕಂಪನಿಗಳು ರಜೆ ನೀಡುವಂತೆ ಆಯೋಗ ಸೂಚನೆ ನೀಡಿದೆ.
ಚುನಾವಣಾ ಆಯೋಗ ಮತದಾನ ಮಾಡಲು ಬೇಕಾದ ಗುರುತಿನ ಚೀಟಿಗಳನ್ನು ಬಿಡುಗಡೆ ಮಾಡಿದೆ. ಆಯೋಗ ನೀಡುವ ಮತದಾರರ ಗುರುತಿನ ಚೀಟಿ ಇಲ್ಲವಾದಲ್ಲಿ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ.
ಅಧಿಕೃತ ದಾಖಲೆಗಳು :
- ಪಾಸ್ ಪೋರ್ಟ್
- ಡ್ರೈವಿಂಗ್ ಲೈಸೆನ್ಸ್
- ಎಂನರೇಗಾ ಜಾಬ್ ಕಾರ್ಡ್
- ಪಾನ್ ಕಾರ್ಡ್
- ಭಾವಚಿತ್ರವಿರುವ ಪಿಂಚಣಿ ದಾಖಲಾತಿ
- ಬ್ಯಾಂಕ್/ಪೋಸ್ಟ್ ಆಫೀಸ್ ನೀಡುವ ಭಾವಚಿತ್ರ ಇರುವ ಪಾಸ್ ಬುಕ್
- ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ಕಾರ್ಡ್
- ಆರ್‌ಜಿಐ ಅಡಿಯಲ್ಲಿ ಎನ್‌ಪಿಆರ್ ನೀಡಿರುವ ಸ್ಮಾರ್ಟ್ ಕಾರ್ಡ್
- ಎಂಪಿ/ಎಂಎಲ್‌ಎ/ಎಂಎಲ್‌ಸಿಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ
- ಆಧಾರ್ ಕಾರ್ಡ್
- ಕೇಂದ್ರ/ರಾಜ್ಯ ಸರ್ಕಾರ/ಸಾರ್ವಜನಿಕ ವಲಯದ ಉದ್ದಿಮೆ/ ಸಾರ್ವಜನಿಕ ಸೀಮಿತ ಕಂಪನಿಗಳ ನೌಕರರಿಗೆ ನೀಡಿರುವ ಫೋಟೋ ಇರುವ ಗುರುತಿನ ಚೀಟಿ
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.