ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.13;

ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಶಿವಾನಂದ ಹಾಗೂ ಗೋಂವಿಂದರಾಜು, ವೆಂಕಟೇಶ್, ಚೌವಾಣ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಗಳು ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಶುಕ್ರವಾರ ಲಭ್ಯವಾಗಿದ್ದರ ಹಿನ್ನೆಲೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಕಾರ್ಮಿಕ ಇಲಾಖೆಗೆ ಸೇರಿದ ಕೌಶಲ್ಯಭವನ ಕಟ್ಟಡದ ಸಮೀಪದ ರಸ್ತೆಯ ಬಳಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಅಲ್ಲಿದ್ದ ಎನ್.ವಿ.ಗೋವಿಂದರಾಜು, ವೆಂಕಟೇಶ್ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು ಇವರುಗಳನ್ನು ಹಾಗೂ ಇವರು ಕೃತ್ಯಕ್ಕೆ ಬಳಸಿದ್ದ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಸಮಯದಲ್ಲಿ ಇವರುಗಳ ಬಳಿಯಿದ್ದ ಅಕ್ರಮವಾಗಿ ಸಂಗ್ರಹಿಸಿದ್ದ ರೂ.13,09,500 ನಗದು ಹಣ, ಒಂದು ಲ್ಯಾಪ್‌ಟಾಪ್, 4 ಮೊಬೈಲ್ ಫೋನ್ ಹಾಗೂ 3 ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳಾದ ಎನ್.ವಿ.ಗೋವಿಂದರಾಜು, ಹಿರಿಯ ಕಾರ್ಮಿಕ ನಿರೀಕ್ಷಕರು ಹಾಗೂ ವೆಂಕಟೇಶ, ಹಿರಿಯ ಕಾರ್ಮಿಕ ನಿರೀಕ್ಷಕರವರನ್ನು ದಸ್ತಗಿರಿ ಮಾಡಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.