ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜೂ.09;
ಡಣಾಪೂರ ಗ್ರಾಮದಲ್ಲಿ ಇಂದು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಹಿಳಾ ಸ್ವಸಹಾಯ ಸಂಘ ಹಾಗೂ ಗ್ರಾಮದ ಯುವಕರಿಂದ ಪರಿಸರ ದಿನಾಚರಣೆಯನ್ನು ಇಂದು ಆಚರಿಸಲಾಯಿತು.
ಈ ವೇಳೆ ಗ್ರಾಮದ ಸರಕಾರಿ ಶಾಲಾ ಹಾಗೂ ದೇವಸ್ಥಾನದ ಆವರಣಗಳಲ್ಲಿ ವಿವಿಧ ತರನಾದ ಸಸಿಗಳನ್ನು ನೆಟ್ಟು, ನೀರೆರೆಯುವುದರ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.
ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಮೇಲ್ವಿಚಾರಕರಾದ ವೀರನಗೌಡ, ಸಂಘದ ಸೇವಾಪ್ರತಿನಿಧಿ, ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಜಗದೀಶಪ್ಪ, ರಮೇಶ ಹಾಗೂ ಸಂಘದ ಸರ್ವ ಸದಸ್ಯರು, ಗ್ರಾಮದ ಯುವಕರು ಸೇರಿದಂತೆ ಪರಿಸರ ಪ್ರೇಮಿಗಳು ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು.
ವರದಿ : ಹನುಮೇಶ್ ಡಣಾಪುರ
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
9513326661
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.