ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.02;

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂಜಿನಿಯರಿಂಗ್, ಪದವಿ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಏಪ್ರಿಲ್ 22ರಿಂದ ಏಪ್ರಿಲ್ 24 ರವರೆಗೆ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಏ. 22ರಂದು ಬುಧವಾರ ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, 2.30ರಿಂದ 3.50ರವರೆಗೆ ಗಣಿತ, ಏ.23ರಂದು ಗುರುವಾರ ಬೆಳಗ್ಗೆ 10.20ರಿಂದ 11.50ರವರೆಗೆ ಭೌತಶಾಸ್ತ್ರ, 2.30ರಿಂದ 3.50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಬೆಂಗಳೂರು ಕೇಂದ್ರದಲ್ಲಿ ಡಿ. 24ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ, ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸ್ ಗಳ ಪ್ರವೇಶಕ್ಕಾಗಿ 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ  ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

60 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅರ್ಹರಾಗಲಿದ್ದಾರೆ.

ಇನ್ನು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ಕೋರಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.