ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.07;

ರಾಜ್ಯದ ಹಲವೆಡೆ ಭಾರಿ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥವಾಗಿದ್ದು, ದೈನಂದಿನ ಚಟುವಟಿಕೆಗಳಿಗೆ ಹಿನ್ನಡೆ ಆಗಿದೆ. ಇದನ್ನು ಗಮನಿಸಿ ರಾಜ್ಯ ಸರ್ಕಾರವು ಸಿಇಟಿ ಪ್ರವೇಶ ಶುಲ್ಕ ಪಾವತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಸಿಇಟಿ ಮೂರನೇ ಸುತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ಗಡುವನ್ನು ಒಂದು ವಾರ ವಿಸ್ತರಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಲ್ಕ ಪಾವತಿಗೆ ಇಂದು ಕೊನೆಯ ದಿನವಾಗಿತ್ತು. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.