ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಜೂ.21;

ಕೇಂದ್ರ ಸಾಹಿತ್ಯ ವೇದಿಕೆ ಬೆಂಗಳೂರು, ಹಾಸನ ಜಿಲ್ಲಾ ಘಟಕ ಹಾಗೂ ಸಕಲೇಶಪುರ ತಾಲೂಕು ಘಟಕದ ವತಿಯಿಂದ ಕೊಡಮಾಡುವ ಚಂದ್ರಶೇಖರ ಧೂಳೇಕರ್ ಪ್ರಶಸ್ತಿಗೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಬಾಲ ಸಾಹಿತಿ ಚಂದ್ರಶೇಖರ ದೋಸಿ ಆಯ್ಕೆಯಾಗಿದ್ದಾರೆ.

ಸದ್ಯ ಹತ್ತನೇ ತರಗತಿಯಲ್ಲಿ ಓದುತ್ತಿರುವ ಚಂದ್ರಶೇಖರ್ ದೋಸಿ ಹುಲಿಹೈದರ್, ಬಾಲ್ಯದಲ್ಲಿಯೇ ಸಾಹಿತ್ಯದಲ್ಲಿ ಒಲವು ಬೆಳೆಸಿಕೊಂಡು ದೀಪ, ಬಿದಿರು ಹೂ, ಕನ್ನಡ ನಾಡು, ಯಾವುದಯ್ಯಾ ಜಾತಿ, ಸಂಕ್ರಾಂತಿ ಮುಂತಾದ ಕವಿತೆಗಳನ್ನು ಹಾಗೂ ಸೋನು ವಿನು ಪ್ರಮುಖ ಕತೆಯನ್ನು ರಚಿಸುವ
ಮೂಲಕ ಬಾಲ್ಯದಲ್ಲಿಯೇ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಹಾಗೂ ಗೌರವ, ಸನ್ಮಾನಗಳನ್ನ ಪಡೆದಿರುವ ಬಾಲಪ್ರತಿಭೆ.

ಹಾಸನ ಜಿಲ್ಲೆಯ ಸಕಲೇಶಪುರದ ಲಯನ್ಸ್ ಸಭಾಂಗಣದಲ್ಲಿ ಜೂ.30 ರಂದು ನಡೆಯುವ ಅಖಿಲ ಕರ್ನಾಟಕ ಪ್ರಪ್ರಥಮ ಕವಿ ಕಾವ್ಯ ಸಮ್ಮೇಳನದಲ್ಲಿ ಇವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷರಾದ ಕೊಟ್ರೇಶ್ ಎಸ್ ಉಪ್ಪಾರ್ ತಿಳಿಸಿದ್ದಾರೆ.

ಚಂದ್ರಶೇಖರ್ ದೋಸಿ ಹುಲಿಹೈದರ್ ಅವರ ತಂದೆ, ತಾಯಿಗಳು ಹಾಗೂ ಕೊಪ್ಪಳ ಜಿಲ್ಲೆಯ ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಅಭಿನಂದನೆಗಳನ್ನ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ : ಎಮ್.ವಿ.ಬಡಿಗೇರ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.