ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.21;

ಐಎನ್ಎಕ್ಸ್ ಮೀಡಿಯಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಸಚಿವ ಪಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ ಲುಕ್ ಔಟ್ ನೊಟೀಸ್ ಜಾರಿಗೊಳಿಸಿದೆ.

ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಿನ್ನೆ ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಮುಂದಿನ ಎರಡು ಗಂಟೆಗಳೊಳಗೆ ಸಿಬಿಐ ಮುಂದೆ ಹಾಜರಾಗುವಂತೆ ಚಿದಂಬರಂ ನಿವಾಸದ ಹೊರಗೆ ನೊಟೀಸ್ ಹಾಕಿದ ನಂತರವೂ ಅವರು ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ಈ ಕ್ರಮ ಕೈಗೊಂಡಿದೆ.

ಚಿದಂಬರಂ ದೇಶ ಬಿಟ್ಟು ಹೋಗುವ ಸಾಧ್ಯತೆಯಿರುವುದರಿಂದ ದೇಶದ ಎಲ್ಲಾ ಪ್ರಮುಖ ವಾಯು, ಬಂದರು ಮತ್ತು ಭೂ ನಿಲ್ದಾಣಗಳಿಗೆ ಜಾರಿ ನಿರ್ದೇಶನಾಲಯ ಎಚ್ಚರಿಕೆ ನೀಡಿದೆ.

ಚಿದಂಬರಂ ಅವರು ಈಗೆಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ, ಐಎನ್ಎಕ್ಸ್ ಮೀಡಿಯಾ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಅವರ ವಿರುದ್ಧ ತನಿಖೆ ಮಾಡುವ ಅವಶ್ಯಕತೆಯಿದೆ. ಈ ಸಂದರ್ಭದಲ್ಲಿ ಬಂಧನ ಭೀತಿಯಿಂದ ಅವರು ದೇಶ ಬಿಟ್ಟು ಹೋಗುವ ಸಾಧ್ಯತೆಯಿರುವುದರಿಂದ ಎಲ್ಲಾ ಕಡೆ ಕಣ್ಗಾವಲು ಇರಿಸುವಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಐಎನ್ಎಕ್ಸ್ ಮೀಡಿಯಾ ವಂಚನೆ ಪ್ರಕರಣದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಚಿದಂಬರಂ ಬಂಧನದಿಂದ ಮುಕ್ತವಾಗಿದ್ದರು. ಈ ಮಧ್ಯೆ ತಮ್ಮನ್ನು ಬಂಧಿಸದಂತೆ ಕೋರಿ ಚಿದಂಬರಂ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

http://karnatakanewsportal.com/inx-mediahagaranna-pchidambaram-bandhanada-bheethi-yedurisuttiruvudu-yeke-yenidu-prakaranna/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.