ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮಾ.29;

ಚಿರಂಜೀವಿ ಸರ್ಜಾ ಅಭಿನಯದ ರಣಂ ಚಿತ್ರದ ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಫೋಟಗೊಂಡು ತಾಯಿ, ಮಗು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಚಿತ್ರದ ಸಾಹಸ ದೃಶ್ಯ ಚಿತ್ರೀಕರಣ ಮಾಡುವ ವೇಳೆ ಸ್ಫೋಟ ಆಗಿದೆ ಎನ್ನಲಾಗಿದೆ.

ನಗರದ ಬಾಗಲೂರಿನ ಶೆಲ್ ಕಂಪನಿ ಬಳಿ ರೋಡ್ ಬ್ಲಾಕ್ ಮಾಡಿ ಚಿತ್ರದ ಫೈಟ್ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ ಬಾಗಲೂರಿನಿಂದ ಸೂಲಿಬೆಲೆಗೆ ತೆರಳುತ್ತಿದ್ದ 28 ವರ್ಷದ ಸುಬೇನಾ ಹಾಗೂ 8 ವರ್ಷದ ಅಹೀರಾ ಇಬ್ಬರು ರಸ್ತೆ ಬದಿ ನಿಂತು ಶೂಟಿಂಗ್ ನೋಡುತ್ತಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.