ಕೆ.ಎನ್.ಪಿ.ವಾರ್ತೆ,ಕಾರವಾರ,ಏ.20;

ಏಪ್ರಿಲ್ 23 ರಂದು ನಡೆಯಲಿರುವ ಕಾರವಾರ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಕರ್ತವ್ಯದಲ್ಲಿ ನಿರತರಾಗಿದ್ದ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರು ತೀವ್ರ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಸೆಕ್ಷನ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕಾಂತ ಆರ್ ಮಲಸೇಕರ್(52) ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಂಕೋಲ ಬಳಿ ಅಕ್ರಮ ಮದ್ಯ ಸಾಗಾಣಿಕೆ ಸಂಬಂಧ ದೂರಿನ ಪರಿಶೀಲನೆಗೆ ಸ್ಥಳಕ್ಕೆ ವಾಹನದಲ್ಲಿ ತೆರಳುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡಿತು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದಾಗ ಆಸ್ಪತ್ರೆಯಲ್ಲಿಯೇ ಅವರು ಮೃತಪಟ್ಟಿದ್ದಾರೆ. ಮೃತ ಅಧಿಕಾರಿ, ಕಾರವಾರ ತಾಲೂಕಿನ ಬಿಣಗ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.