ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.11;

ಭಾರಿ ಚರ್ಚೆಗೆ ಗ್ರಾಸವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಬುಧವಾರ ಮಂಡನೆಯಾಗಿದೆ.

ಲೋಕಸಭೆಯಲ್ಲಿ ಈಗಾಗಲೇ 293-82 ಮತಗಳಿಂದ ಅಂಗೀಕಾರ ಪಡೆದುಕೊಂಡಿರುವ ಮಸೂದೆಗೆ ಈಗ ರಾಜ್ಯಸಭೆಯಲ್ಲಿ ಪರೀಕ್ಷೆ ಎದುರಾಗಿದೆ.

ಕಲಾಪ ಆರಂಭವಾಗುತ್ತಿದ್ದಂತೆ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿದರು. ಈ ತಿದ್ದುಪಡಿ ಮಸೂದೆ ದೇಶದ ಅಲ್ಪಸಂಖ್ಯಾತರ ವಿರುದ್ಧವಾಗಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಧೇಯಕದಿಂದ ಕೋಟ್ಯಂತರ ಜನರಲ್ಲಿ ನಿರೀಕ್ಷೆ ಹುಟ್ಟಿದೆ. ಗೌರವಯುತ ಜೀವನ ಸಿಗುವ ಸಾಧ್ಯತೆ ಇದೆ. ಆಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರು ಸಂತೋಷವಾಗಿಲ್ಲ, ನಿರಾಶ್ರಿತರಾಗಿದ್ದಾರೆ.

ಬಿಜೆಪಿಯ ಪ್ರಣಾಳಿಕೆಯಲ್ಲಿ ಇದ್ದ ಮತ್ತೊಂದು ಭರವಸೆಯನ್ನು ನಾವು ಈಡೇರಿಸುತ್ತಿದ್ದೇವೆ ಎಂದು ಅಮಿತ್‌ ಶಾ ತಮ್ಮ ಭಾಷಣದಲ್ಲಿ ಹೇಳಿದರು.

ನಾವು ವೋಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ಈ ವಿಧೇಯಕವನ್ನು ಮಂಡನೆ ಮಾಡುತ್ತಿಲ್ಲ. ಯಾವುದೇ ವಿಧದಲ್ಲೂ ಈ ವಿಧೇಯಕ ಮುಸ್ಲಿಮರ ವಿರುದ್ಧವಾಗಿಲ್ಲ ಎಂದು ಅಮಿತ್‌ ಶಾ ಪುನರುಚ್ಚರಿಸಿದರು.

ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಲು 121 ಮತಗಳು ಕೇಂದ್ರ ಸರಕಾರಕ್ಕೆ ಅಗತ್ಯವಾಗಿದೆ. ಎನ್‌ಡಿಎ ಪರವಾಗಿ ಈಗ 106 ಸದಸ್ಯರು ಇದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ಕಾಯಿದೆ ಮೂಲಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದ ಮುಸ್ಲಿಂತೇರ ನಿರಾಶ್ರಿತರಿಗೆ ಭಾರತೀಯ ನಾಗರಿಕತ್ವ ಸಿಗುವ ಅವಕಾಶ ಇದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.