ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.12;

ಪೌರತ್ವ ತಿದ್ದುಪಡಿ ಮಸೂದೆ (CAB) ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳ ಜನರಿಗೆ ಅಭಯ ನೀಡಿದ್ದು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಅಸ್ಸಾಂಮಿನ ಸಹೋದರ ಸಹೋದರಿಯರು ಪೌರತ್ವ ತಿದ್ದುಪಡಿ ಮಸೂದೆ (CAB) ಜಾರಿಯಿಂದ ಆತಂಕ ಪಡಬೇಕಾದ ಅಗತ್ಯವಿಲ್ಲ. ಮಸೂದೆ ಜಾರಿಯಿಂದ ಜನರ ಹಕ್ಕುಗಳನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ.

ನಿಮ್ಮ ಅಸ್ಮಿತೆ ಹಾಗೂ ಸಂಸ್ಕೃತಿಗೆ ಯಾವುದೇ ರೀತಿಯಲ್ಲಿ ಧಕ್ಕೆ ಉಂಟಾಗುವುದಿಲ್ಲ. ಅಸ್ಸಾಂ ಜನರ ಹಿತ ಕಾಪಾಡಲು ಸರಕಾರ ಬದ್ಧ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರಕಾರ ಅಸ್ಸಾಂ ಜನರ ರಾಜಕೀಯ, ಸಾಂಸ್ಕೃತಿಕ ಹಾಗೂ ಭೂಮಿಯ ಹಕ್ಕಿನ ರಕ್ಷಣೆಗೆ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಅಭಯ ನೀಡಿದ್ದಾರೆ.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ 2019 (CAB) ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಧರ್ಮಾಧಾರಿತ ಪೌರತ್ವ ನೀಡುವ ಮಸೂದೆಗೆ ಅಸ್ಸಾಂ, ತ್ರಿಪುರಾ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಮಸೂದೆ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಹಿಂಸಾತ್ಮಕ ಸ್ವರೂಪ ಪಡೆದುಕೊಳ್ಳುತ್ತಿದೆ.

ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಮಸೂದೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದು ದೇಶದ ಇತಿಹಾಸದಲ್ಲಿ ಕರಾಳ ದಿನ ಎಂದು ಬಣ್ಣಿಸಿವೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.