ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.09;

ಪೌರತ್ವ (ತಿದ್ದುಪಡಿ) ಮಸೂದೆಗೆ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಮಸೂದೆ ಪರವಾಗಿ 293 ಸದಸ್ಯರು ಮತ ಹಾಕಿದರೆ ವಿರುದ್ಧವಾಗಿ 82 ಮತಗಳು ಬಿದ್ದವು.

ಇಂದು ಬೆಳಗ್ಗೆ ಸದನದಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಈ ಉದ್ದೇಶಿತ ಮಸೂದೆಯನ್ನು ಮಂಡಿಸಿದರು. ಈ ತಿದ್ದುಪಡಿ ಮಸೂದೆ ದೇಶದ ಅಲ್ಪಸಂಖ್ಯಾತರ ವಿರುದ್ಧವಾಗಿ ಶೇಕಡಾ 0.001ರಷ್ಟು ಕೂಡ ಇಲ್ಲ ಎಂದರು.

ನಮ್ಮ ದೇಶದ ಕಾನೂನಿನ ಪ್ರಕಾರ, ಆಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಮುಸ್ಲಿಂರು ನಾಗರಿಕತ್ವಕ್ಕೆ ಅರ್ಜಿ ಹಾಕಿದರೆ ನಾವು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಧಾರ್ಮಿಕ ಕಿರುಕುಳ ಅನುಭವಿಸದ ವ್ಯಕ್ತಿ ಈ ತಿದ್ದುಪಡಿಯಿಂದ ಪ್ರಯೋಜನ ಪಡೆಯುವುದಿಲ್ಲ.

ಈ ದೇಶದಲ್ಲಿ ಸಿಖ್ಖರು, ಕ್ರಿಶ್ಚಿಯನ್ನರು, ಪಾರ್ಸಿಗಳು ಮತ್ತು ಜೈನರ ಮೇಲೆ ತಾರತಮ್ಯ ತೋರಲಾಗುತ್ತಿದೆ. ಇಂತಹ ನಾಗರಿಕರಿಗೆ ಈ ತಿದ್ದುಪಡಿ ಮಸೂದೆಯಿಂದ ನಾಗರಿಕತ್ವ ಸಿಗಲಿದೆ. ಮುಸ್ಲಿಂರ ಹಕ್ಕುಗಳು ಈ ತಿದ್ದುಪಡಿ ಮಸೂದೆ ಕಿತ್ತುಕೊಳ್ಳುತ್ತದೆ ಎನ್ನುವುದು ತಪ್ಪು ಎಂದರು.

ಪೌರತ್ವ (ತಿದ್ದುಪಡಿ) ಮಸೂದೆ 2019 ಮೂಲಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದ ಮುಸ್ಲಿಂತೇರ ನಿರಾಶ್ರಿತರಿಗೆ ಭಾರತೀಯ ನಾಗರಿಕತ್ವ ಸಿಗಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.