ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ಜು.28;

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಅವರು ಹೈದರಾಬಾದ್‌ನಲ್ಲಿ ಇಂದು ಮುಂಜಾನೆ ನಿಧನ ಹೊಂದಿದ್ದಾರೆ. 

77 ವರ್ಷದ ರೆಡ್ಡಿ ಅವರಿಗೆ ಇತ್ತೀಚೆಗೆ ನ್ಯುಮೋನಿಯಾ ಇರುವುದು ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವರು ಮುಂಜಾನೆ 1.28 ಕ್ಕೆ ನಿಧನರಾದರು ಎಂದು ತಿಳಿದುಬಂದಿದೆ.

ಜೈಪಾಲ್ ರೆಡ್ಡಿ 1984 ರಿಂದ ದಶಕಗಳ ಕಾಲ ಐದು ಬಾರಿ ಸಂಸದರಾಗಿ, ಎರಡು ಬಾರಿ ರಾಜ್ಯಸಭೆಗೂ ಆಯ್ಕೆಯಾಗಿದ್ದರು. ಮತ್ತು ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು.

ಐಕೆ ಗುಜ್ರಾಲ್ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದ ರೆಡ್ಡಿ ಯುಪಿಎ -1 ಸರ್ಕಾರದ ಅವಧಿಯಲ್ಲಿ ನಗರಾಭಿವೃದ್ದಿ ಮತ್ತು ಸಂಸ್ಕೃತಿ ಖಾತೆ ನಿರ್ವಹಿಸಿದ್ದರು. ಯುಪಿಎ -2 ರಲ್ಲಿ ಅವರನ್ನು ಮತ್ತೆ ನಗರಾಭಿವೃದ್ಧಿ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ನಂತರ, ಅವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವರೂ ಆಗಿದ್ದರು. ಜೈಪಾಲ್ ರೆಡ್ಡಿ ಲೋಕಸಭೆಯಲ್ಲಿ ತೆಲಂಗಾಣದ ಚೆವೆಲ್ಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.