ಕೆ.ಎನ್.ಪಿ.ವಾರ್ತೆ,ನವದೆಹಲಿ,ಅ.26;

ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ಗೆ ಪ್ರತಿಯಾಗಿ ಕಾಂಗ್ರೆಸ್ ದೇಶ್ ಕಿ ಬಾತ್ ಕಾರ್ಯಕ್ರಮವನ್ನು ಇಂದಿನಿಂದ ನಡೆಸಲಿದ್ದು ಸೋಷಿಯಲ್ ಮೀಡಿಯಾಗಳ ಮೂಲಕ ನೇರ ಪ್ರಸಾರ ಮಾಡಲು ಉದ್ದೇಶಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ನ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತಾ, ದೇಶದ ಸಾಮಾನ್ಯ ಜನತೆಯ ಸಮಸ್ಯೆಗಳನ್ನು ಮತ್ತು ಸರ್ಕಾರದ ವೈಫಲ್ಯಗಳನ್ನು, ಈಡೇರಿಸದಿರುವ ಭರವಸೆಗಳನ್ನು ಮತ್ತು ಪ್ರಮುಖ ಸಾರ್ವಜನಿಕ ಸಮಸ್ಯೆಗಳನ್ನು ದೇಶ್ ಕಿ ಬಾತ್ ನಲ್ಲಿ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.

ಪಕ್ಷದ ಹಿರಿಯ ನಾಯಕ, ಇತ್ತೀಚಿನ ವಿಧಾನಸಭಾ ಚುನಾವಣೆ ಫಲಿತಾಂಶದಿಂದ ಜನರ ತೀರ್ಪು ಏನೆಂಬುದು ಸ್ಪಷ್ಟವಾಗಿದೆ. ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಜವಾಬ್ದಾರಿಯುತ ವಿರೋಧಪಕ್ಷವಾಗಿ ಕಾಂಗ್ರೆಸ್ ದೇಶದ ಜನರು ಎದುರಿಸುತ್ತಿರುವ ವಾಸ್ತವ ಸಮಸ್ಯೆಗಳನ್ನು ದೇಶ್ ಕಿ ಬಾತ್ ನಲ್ಲಿ ಚರ್ಚಿಸಲಿದೆ ಎಂದು ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.