ಕೆ.ಎನ್.ಪಿ.ವಾರ್ತೆ,ರಾಂಚಿ,ಡಿ.23;

ಇತ್ತೀಚೆಗೆ ಮುಕ್ತಾಯವಾದ ಜಾರ್ಖಂಡ್ ವಿಧಾನಸಭಾ ಚುನಾವಣಾ (jharkhand assembly election) ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲೂ ಏಕಕಾಲದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮತ ಎಣಿಕೆ ಕಾರ್ಯಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈ ಹಿಂದೆ ಮೊದಲ ಹಂತದ ಮತದಾನದ ವೇಳೆ ನಕ್ಸಲು ಸೇತುವೆ ಸ್ಫೋಟಿಸಿ ತಮ್ಮ ವಿರೋಧ ವ್ಯಕ್ತಪಡಿಸಿದ್ದರು.

ಮತದಾನ ಬಹಿಷ್ಕರಿಸುವಂತೆ ಎಚ್ಚರಿಕೆ ನೀಡಿದ್ದ ನಕ್ಸಲೀಯರು ಮತದಾನಕ್ಕೆ ಅಡ್ಡಿಪಡಿಸಲೆಂದು ಗುಮ್ಲಾ ಜಿಲ್ಲೆಯ ಬಿಶ್ಣುಪುರ್ ನಲ್ಲಿರುವ ಸೇತುವೆಯನ್ನು ಸ್ಫೋಟಿಸಿದ್ದರು.

ಹೀಗಾಗಿ ಮತ ಎಣಿಕೆ ಕಾರ್ಯಕ್ಕೂ ನಕ್ಸಲರು ಅಡ್ಡಿ ಪಡಿಸುವ ಭೀತಿ ಇದ್ದು, ಸಶಸ್ತ್ರ ಪಡೆ ಸಹಿತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಜಾರ್ಖಂಡ್ ನ ಒಟ್ಟು 81 ಸ್ಥಾನಗಳಿಗೆ ಐದು ಹಂತಗಳಲ್ಲಿ ನವೆಂಬರ್ 30ರಿಂದ ಡಿಸೆಂಬರ್ 20ರವರೆಗೆ ಮತದಾನ ನಡೆದಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.