ಕೆ.ಎನ್.ಪಿ.ವಾರ್ತೆ,ಗುವಾಹಟಿ,ಡಿ.12;

ಪೌರತ್ವ ತಿದ್ದುಪಡಿ ಕಾಯ್ದೆ (CAB) ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೇಳುತ್ತಿದೆ.

ಅಸ್ಸಾಂನ ರಾಜಧಾನಿ ಗುವಾಹಟಿಯಲ್ಲಿ ಪ್ರತಿಭಟನಾಕಾರರ ಹೋರಾಟ ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಗುವಾಹಟಿ ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಬೃಹತ್ ಪ್ರತಿಭಟನೆಗೆ ಯಾವುದೇ ಪಕ್ಷ ಕರೆ ನೀಡಿರಲಿಲ್ಲವಾದರೂ, ಸಾವಿರಾರು ವಿದ್ಯಾರ್ಥಿಗಳು ಹಾಗೂ ನಾಗರಿಕರು ಸ್ವಯಂ ಪ್ರೇರಣೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಅಸ್ಸಾಂ ರಾಜಧಾನಿ ಗುವಾಹತಿ, ದಿಬ್ರುಗಡ, ಜೊಹ್ರತ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ ಪರಿಣಾಮ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಸ್ಸಾಂ, ತ್ರಿಪುರಾದಲ್ಲಿ ಸೇನೆ ನಿಯೋಜನೆ :

ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ತಾಳಿದ್ದು, ಹಿಂಸಾಪೀಡಿತ ತ್ರಿಪುರಾ ಹಾಗೂ ಅಸ್ಸಾಂನಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ 5000 ಅರೆಸೇನಾಪಡೆ ಸಿಬ್ಬಂದಿಯನ್ನು ವಿಶೇಷ ವಿಮಾನಗಳ ಮೂಲಕ ಕಳುಹಿಸಿಕೊಡಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಭದ್ರತೆಗೆ ನಿಯೋಜಿಸಿದ್ದ ಸಿಬ್ಬಂದಿ ಪೈಕಿ 2 ಸಾವಿರ ಯೋಧರು ಹಾಗೂ ದೇಶದ ವಿವಿಧ ಭಾಗಗಳಿಂದ 3 ಸಾವಿರ ಯೋಧರನ್ನು ಕರೆಯಿಸಿಕೊಂಡು, ಈಶಾನ್ಯ ರಾಜ್ಯಗಳಿಗೆ ರವಾನಿಸಲಾಗಿದೆ.

ಸಿಆರ್‌ಪಿಎಫ್, ಬಿಎಸ್‌ಎಫ್ ಹಾಗೂ ಎಸ್‌ಎಸ್‌ಬಿ ಯೋಧರು ಈ ತಂಡಗಳಲ್ಲಿದ್ದಾರೆ. ತ್ರಿಪುರಾದಲ್ಲಿ ಸೇನಾ ಕಣ್ಗಾವಲು ಹಾಕಲಾಗಿದ್ದು, ಸುಮಾರು 15 ಸಾವಿರಕ್ಕೂ ಅಧಿಕ ಸೈನಿಕರು ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಅಲಿಗಡ ವಿ.ವಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌

ಪೌರತ್ವ ತಿದ್ದುಪಡಿ ಮಸೂದೆ (CAB) ವಿರೋಧಿಸಿ ಪ್ರತಿಭಟನೆ ನಡೆಸಿದ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ 20 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಿಶ್ವವಿದ್ಯಾಲಯದ ಪ್ರವೇಶ ದ್ವಾರಗಳಲ್ಲಿ ಕ್ಷಿಪ್ರ ಕಾರ್ಯಪಡೆ ನಿಯೋಜಿಸಲಾಗಿದ್ದು, ಭದ್ರತೆ ಬಿಗಿಗೊಳಿಸಲಾಗಿದೆ. ನಿಷೇಧಾಜ್ಞೆ (144 ಸೆಕ್ಷನ್) ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ವಿದ್ಯಾರ್ಥಿ ಮುಖಂಡರು ಹಾಗೂ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಶಾಂತಿಭಂಗ ಆರೋಪದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿವಿಲ್ ಲೈನ್ಸ್ ಠಾಣಾಧಿಕಾರಿ ಅಮಿತ್ ಕುಮಾರ್ ತಿಳಿಸಿದ್ದಾರೆ. ಆದರೆ ಮಂಗಳವಾರ ಸಂಜೆ ವಿದ್ಯಾರ್ಥಿಗಳು ನಡೆಸಿದ ಮೆರವಣಿಗೆ ಶಾಂತಿಯುತವಾಗಿತ್ತು ಎಂದು ವಿಶ್ವವಿದ್ಯಾಲಯದ ಶಿಸ್ತುಪಾಲನಾ ಅಧಿಕಾರಿ ಅಫಿಫುಲ್ಲಾ ಖಾನ್ ಸ್ಪಷ್ಟಪಡಿಸಿದ್ದಾರೆ.

CAB : ಪೌರತ್ವ ತಿದ್ದುಪಡಿ ಮಸೂದೆ ಅಂದರೆ ಏನು, ಏಕೆ ವಿರೋಧ? ಇಲ್ಲಿದೆ ನೋಡಿ ಡಿಟೇಲ್ಸ್…

ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.