ಕೆ.ಎನ್.ಪಿ.ವಾರ್ತೆ,ನವದೆಹಲಿ,ಅ.23;

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅ.23 ರಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಡಿ.ಕೆ ಶಿವಕುಮಾರ್ ಅವರಿಂದ ಸಾಕ್ಷ್ಯನಾಶದ ಸಾಧ್ಯತೆಗಳು ಕಡಿಮೆ ಇರುವುದನ್ನು ಮನಗಂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

25 ಲಕ್ಷ ರೂಪಾಯಿ ಬಾಂಡ್ ನೀಡುವುದು, ಪಾಸ್ಪೋರ್ಟ್ ನ್ನು ಕೋರ್ಟ್ ವಶಕ್ಕೆ ನೀಡಬೇಕು ಹಾಗೂ ವಿಚಾರಣೆಗೆ ಅಗತ್ಯವಿದ್ದಾಗ ಹಾಜರಾಗಬೇಕೆಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.