ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. 
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ಪ್ರಸ್ತುತ ಬಿಡುಗಡೆ ಮಾಡಿರುವ ವೇಳಾಪಟ್ಟಿಯು ಅಂತಿಮ ವೇಳಾಪಟ್ಟಿ ಆಗಿದೆ.

2019-20 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್‌ 4, 2020 ರಿಂದ ಆರಂಭವಾಗಲಿದ್ದು, ಮಾರ್ಚ್ 23 ವರೆಗೆ ನಡೆಯಲಿದೆ. ಈ ಪರೀಕ್ಷೆ ಆರಂಭ ದಿನಾಂಕದಿಂದ ಮುಕ್ತಾಯದವರೆಗೆ ಮಧ್ಯದಲ್ಲಿ ಕೇವಲ 3 ದಿನಗಳು ಮಾತ್ರ ರಜಾ ದಿನಗಳಿವೆ.

ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ಅಂತಿಮ ವೇಳಾಪಟ್ಟಿ ಈ ಕೆಳಗಿನಂತಿದೆ…

ಮಾರ್ಚ್ ತಿಂಗಳ 4 ರಿಂದ ಪ್ರಾರಂಭವಾಗಿ ಮಾರ್ಚ್ 23ರ ವರೆಗೆ ಪರೀಕ್ಷೆಗಳು ನಡೆಯುತ್ತವೆ.

 • 04-3-2020 : ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್‌ 
 • 05-3-2020 : ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
 • 06-3-2020 : ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ 
 • 07-3-2020 : ಬಿಜಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನಶಾಸ್ತ್ರ 
 • 09-3-2020 : ಎನ್‌ಎಸ್‌ಕ್ಯೂಎಫ್‌-ಐಟಿ, ರಿಟೇಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
 • 10-3-2020 : ಉರ್ದು
 • 11-3-2020 :  ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ
 • 12-3-2020 : ಭೂಗೋಳಶಾಸ್ತ್ರ 
 • 13-3-2020 : ಶಿಕ್ಷಣ
 • 14-3-2020 : ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
 • 16-3-2020 : ಲಾಜಿಕ್, ಭೂಗರ್ಭಶಾಸ್ತ್ರ, ಗೃಹವಿಜ್ಞಾನ
 • 17-3-2020 : ಅರ್ಥಶಾಸ್ತ್ರ, ಜೀವಶಾಸ್ತ್ರ
 • 18-3-2020 : ಹಿಂದಿ 
 • 19-3-2020 : ಕನ್ನಡ
 • 20-3-2020 : ಸಂಸ್ಕೃತ
 • 21-3-2020 : ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
 • 23-3-2020 : ಇಂಗ್ಲೀಷ್ 

ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟ

 

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪರೀಕ್ಷಾ ಶುಲ್ಕ ಸಂದಾಯ ಮಾಡಲು ನಿಗದಿ ಪಡಿಸಿದ್ದ ಕೊನೆಯ ದಿನಾಂಕವನ್ನು ನವೆಂಬರ್ 16 ವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಸಂದಾಯ ಮಾಡಿದ ಪರೀಕ್ಷಾ ಶುಲ್ಕವನ್ನು ಅಪ್‌ಲೋಡ್ ಮಾಡಿ ಸಂದಾಯ ಮಾಡಲು ಕಾಲೇಜಿನವರಿಗೆ ನವೆಂಬರ್ 18 ವರೆಗೆ ಅವಕಾಶ ನೀಡಿದೆ. ಪರೀಕ್ಷಾ ಶುಲ್ಕ ಪಾವತಿಸಲು ಮತ್ತೊಮ್ಮೆ ಯಾವುದೇ ಕಾರಣಕ್ಕೂ ಅವಕಾಶ ನೀಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಸೂಚಿಸಿದೆ.

 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.