ಕೆ.ಎನ್.ಪಿ.ವಾರ್ತೆ,ನವದೆಹಲಿ,ಮೇ.14;

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ ನಟ ಕಮಲ್ ಹಾಸನ್ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನಲ್ಲಿ ದಾಖಲಿಸಲಾಗಿದೆ.

ಗಾಂಧಿಯನ್ನು ಕೊಂದಿದ್ದ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ ಎಂಬ ಕಮಲ್ ಹಾಸನ್ ಹೇಳಿಕೆ ವಿರುದ್ಧ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ.

ಚುನಾವಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದ ಕಮಲ್ ಹಾಸನ್, ಈ ಹೇಳಿಕೆ ನೀಡಿದ್ದರು. ಕಮಲ್ ಹಾಸನ್ ಅವರನ್ನು ಪ್ರಚಾರದಿಂದ ನಿರ್ಬಂಧಿಸಬೇಕೆಂದು ಬಿಜೆಪಿ ಆಗ್ರಹಿಸಿತ್ತು.

“ಕಮಲ್ ಹಾಸನ್ ಹಿಂದೂಗಳನ್ನು ಭಯೋತ್ಪಾದನೆಗೆ ತಳುಕು ಹಾಕುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ” ಎಂದು ದೂರಿನಲ್ಲಿ ಹೇಳಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.